ಹರಿಹರದ ತಾಪಂ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕುಂದುಕೊರತೆ ಸಭೆಯಲ್ಲಿ ಶಾಸಕ ಬಿ.ಪಿ. ಹರೀಶ್ ವಾತನಾಡಿದರು. ಸಂತೋಷ್ ಕುವಾರ್, ಈರಮ್ಮ , ಬಸವರಾಜ್ ಇದ್ದರು. problem
- ಶಾಸಕ ಬಿ.ಪಿ. ಹರೀಶ್ ಹೇಳಿಕೆ
- ರಾಜ್ಯ ಸರ್ಕಾರದ ಖಜಾನೆ ಖಾಲಿ ಖಾಲಿ
ಹರಿಹರ: ನಗರದಲ್ಲಿ ಸಮಸ್ಯೆಗಳು ಸಾಗರದಷ್ಟಿವೆ, ಅನುದಾನದ ಕೊರತೆ ಇರುವುದರಿಂದ ಸಾಧ್ಯವಾದಷ್ಟು ಅಭಿವೃದ್ಧಿ ಪಡಿಸಿ ನೆಮ್ಮದಿ ಕಾಣಬೇಕಿದೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು. problem
ತಾಪಂ ಸಭಾಂಗಣದಲ್ಲಿ ಸೋಮವಾರ ಆಯೋ ಜಿಸಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯ ಅಧ್ಯಕ್ಷತೆವಹಿಸಿ ವಾತನಾಡಿದರು.
ರಾಜ್ಯ ಸರ್ಕಾರದಿಂದ ಅನುದಾನ ತರುವುದು ಕಷ್ಟ, ಕ್ಷೇತ್ರದ ಅಭಿವೃದ್ಧಿಗಾಗಿ ಬಂದ ಮನವಿಗಳಿಗೆ ಉತ್ತರ ನೀಡಲಾಗುತ್ತಿಲ್ಲ ಎಂದರು. ಪಟೇಲ್ ಬಡಾವಣೆಗೆ ಮೂಲ ಸೌಕರ್ಯವಿಲ್ಲ, ವಿಷ ಜಂತುಗಳ ಸಮಸ್ಯೆ ಹೆಚ್ಚಾಗಿದೆ. ಅಧಿಕಾರಿಗಳ ಗಮನಕ್ಕೆ ತಂದರೆ ಇದು ಅನಧಿಕೃತ ಬಡಾವಣೆ ಎನ್ನುತ್ತಲೇ ಕಂದಾಯ ವಸೂಲಿ ಮಾಡುತ್ತಿದ್ದಾರೆ. ಇಲ್ಲಿನ ಜನ ಮಾರಕ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು ಇಲ್ಲಿನ ನಿವಾಸಿ ಪದ್ಮಾವತಿ ಸಹಿತ ಅನೇಕರು ಆಕ್ರೋಶ ವ್ಯಕ್ತಪಡಿಸಿದರು.
ನಗರಸಭೆ ಪೌರಾಯುಕ್ತರು ಹಾಗೂ ಎಇಇ ಮಂಗಳವಾರ ಪಟೇಲ್ ಬಡಾವಣೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಮತ್ತು ಕೈಗೊಳ್ಳಬೇಕಾದ ಕ್ರಮಗಳ ವರದಿ ನೀಡುವಂತೆ ಶಾಸಕರು ಸೂಚಿಸಿದರು. ನಗರದ ಮಧ್ಯದಲ್ಲಿರುವ ವಾರದ ಸಂತೆಯನ್ನು ಸ್ಥಳಾಂತರಿಸುವಂತೆ ಸಾರ್ವಜನಿಕರ ಮನವಿ ಮಾಡಿದ್ದರಿಂದಾಗಿ ಮುಂದಿನ ವಾರದಿಂದ ಎಪಿಎಂಸಿಗೆ ಸ್ಥಳಾಂತರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
4-5 ಕೋಟಿ ರೂ. ವೆಚ್ಚದಲ್ಲಿ ಮುಖ್ಯರಸ್ತೆಯ ಪಕ್ಕ ಪಾದಚಾರಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಬೀದಿ ಬದಿ ವ್ಯಾಪಾರಿಗಳನ್ನು ಸ್ಥಳಾಂತರಿಸಬೇಕಿದೆ. ಫುಡ್ ಕೋರ್ಟ್ ವಾಡುವಂತೆ ಸಾರ್ವಜನಿಕರು ಮನವಿ ವಾಡಿದರು. ಹರಪನಹಳ್ಳಿ ರಸ್ತೆಯ ರೈಲ್ವೆ ಕೇಳ ಸೇತುವೆಯಲ್ಲಿ ಮಳೆಗಾಲದಲ್ಲಿ ನೀರು ನಿಂತು ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ತೀವ್ರವಾದ ತೊಂದರೆಯಾಗುತ್ತಿದೆ. ಜೋರು ಮಳೆ ಬಂದಲ್ಲಿ ಸಮಸ್ಯೆಯಾಗುತ್ತದೆ. ಇದರ ತೀವ್ರತೆ ಅಧಿಕಾರಿಗಳಿಗೆ ಆರ್ಥವಾಗುತ್ತಿಲ್ಲವೇ ಎಂದು ತರಾಟೆ ತೆಗೆದುಕೊಂಡರು. ರೈಲ್ವೆ ಇಲಾಖೆಯ ಎಇಇಗೆ ಕರೆ ಮಾಡಿ ಸಮಸ್ಯೆಯನ್ನು ಶೀಘ್ರ ಶಮನ ಮಾಡುವಂತೆ ಶಾಸಕರು ತಿಳಿಸಿದರು.
ಮಳೆಗಾಲ ಆರಂಭವಾಗಿದ್ದು ಚರಂಡಿ ಸ್ವಚ್ಛಗೊಳಿಸಿ ಮನೆಗಳಿಗೆ ನೀರು ನುಗ್ಗದಂತೆ ನೋಡಿಕೊಳ್ಳಿ. ಲಭ್ಯ ಅನುದಾನದಲ್ಲಿ ಆದ್ಯತೆ ಮೇರೆಗೆ ಕಾಮಗಾರಿ ಮಾಡಿ ಎಂದರು. ಸಭೆಯಲ್ಲಿ ತಹಸೀಲ್ದಾರ್ ಜಿ. ಸಂತೋಷ್ ಕುವಾರ್, ಪೌರಾಯುಕ್ತೆ ಈರಮ್ಮ, ತಾಪಂ ಇಒ ಬಸವರಾಜ್ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.