ದಾವಣಗೆರೆಯಲ್ಲಿ ಶುಕ್ರವಾರ, ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಾದ ರಘು ಕೌಟಿಲ್ಯ ಹಾಗೂ ಲಿಂಗರಾಜ್ ಪಾಟೀಲ್ ಆಯ್ಕೆಯಾದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ರಾಜನಹಳ್ಳಿ ಶಿವಕುಮಾರ್, ಮಹೇಂದ್ರ ಹೆಬ್ಬಾಳ್, ಅಣಜಿ ಗುಡ್ಡೇಶ್, ಕಿರೀಟ ಸಿ. ಕಲಾಲ್, ನಿಂಗರಾಜ್ ಹಾವನೂರ, ಡೈಮಂಡ್ ಮಂಜಣ್ಣ, ಸುರೇಂದ್ರ ಮೊಯ್ಲಿ, ಮಂಜುನಾಥ್ ಇದ್ದರು.  
ದಾವಣಗೆರೆ

ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಪ್ರಮುಖ ಮುಖ್ಯಾಂಶಗಳು

  • ವಿಧಾನ ಪರಿಷತ್ ಚುನಾವಣೆ ಗೆಲುವು
  • ಸಿಹಿ ತಿನ್ನಿಸಿ, ಪಟಾಕಿ ಸಿಡಿಸಿ ಸಂಭ್ರಮ
ದಾವಣಗೆರೆ : ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಾದ ರಘು ಕೌಟಿಲ್ಯ ಹಾಗೂ ಲಿಂಗರಾಜ್ ಪಾಟೀಲ್ ಆಯ್ಕೆಯಾದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಬಿಜೆಪಿ ಕಚೇರಿಯ ಮುಂದೆ ಶುಕ್ರವಾರ ವಿಜಯೋತ್ಸವ ಆಚರಿಸಿದರು.
ಇದೇ ವೇಳೆ ಕಾರ್ಯಕರ್ತರು ಪರಸ್ಪರ ಸಿಹಿ ತಿನ್ನಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ವೇಳೆ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜನಹಳ್ಳಿ ಶಿವಕುಮಾರ್ ಮಾತನಾಡಿ, ಬಿಜೆಪಿಯು ಸಾಮಾನ್ಯ ಕಾರ್ಯಕರ್ತರಿಗೆ ವಿಧಾನ ಪರಿಷತ್ ಟಿಕೆಟ್ ನೀಡುವ ಮೂಲಕ ಗೆಲ್ಲಿಸಿದೆ ಎಂದರು.
ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಕೊಟ್ಟಿದೆ. ಎಲ್ಲ ವರ್ಗದವರಿಗೂ ಆದ್ಯತೆ ನೀಡಿದೆ. ಹಣವಿದ್ದವರಿಗೆ ಮಾತ್ರ ವಿಧಾನ ಪರಿಷತ್ ಟಿಕೆಟ್ ನೀಡುವ ಸಂಪ್ರದಾಯಕ್ಕೆ ಬ್ರೇಕ್ ಹಾಕಿದ್ದೇ ಬಿಜೆಪಿ. ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳಲ್ಲಿ ಪಕ್ಷಕ್ಕಾಗಿ ಹಗಲಿರುಳು ದುಡಿದವರಿಗೆ ಮನ್ನಣೆ ನೀಡುತ್ತದೆ. ದೇಶದಲ್ಲಿ ಬೇರೆ ಯಾವ ಪಕ್ಷಗಳಲ್ಲಿಯೂ ಈ ಸಂಪ್ರದಾಯ ಇಲ್ಲ. ಹಾಗಾಗಿಯೇ ದೇಶದ ಜನರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಒಪ್ಪಿದ್ದಾರೆ ಎಂದು ಹೇಳಿದರು.
ರಘು ಕೌಟಿಲ್ಯ ಹಾಗೂ ಲಿಂಗರಾಜ್ ಪಾಟೀಲ್ ಪಕ್ಷದ ಸಂಘಟನೆಗೆ ಅವಿರತ ಶ್ರಮ ವಹಿಸಿದ್ದಾರೆ. ಪಕ್ಷ ವಹಿಸಿದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಪಕ್ಷ ನಿಷ್ಠೆ, ಸಂಘಟನೆ ಸೇರಿ ಎಲ್ಲ ಆಯಾಮಗಳಲ್ಲಿಯೂ ಚಿಂತಿಸಿ ಟಿಕೆಟ್ ನೀಡಿದ್ದು, ಗೆದ್ದಿರುವ ಇಬ್ಬರೂ ಅಭ್ಯರ್ಥಿಗಳು ರಾಜ್ಯ ಸರ್ಕಾರದ ಅಕ್ರಮ, ಭ್ರಷ್ಟಾಚಾರ, ಜನವಿರೋಧಿ ನೀತಿಗಳ ಬಗ್ಗೆ ಸಮರ್ಥವಾಗಿ ಧ್ವನಿ ಎತ್ತುತ್ತಾರೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.
ಸಂಭ್ರಮಾಚರಣೆ ವೇಳೆ ಬಿಜೆಪಿ ಜಿಲ್ಲಾ ಒಬಿಸಿ ಘಟಕದ ಅಧ್ಯಕ್ಷ ಮಹೇಂದ್ರ ಹೆಬ್ಬಾಳ್, ಅಣಜಿ ಗುಡ್ಡೇಶ್, ಕಿರೀಟ ಸಿ. ಕಲಾಲ್, ನಿಂಗರಾಜ್ ಹಾವನೂರ, ಡೈಮಂಡ್ ಮಂಜಣ್ಣ, ಸುರೇಂದ್ರ ಮೊಯ್ಲಿ, ಮಂಜುನಾಥ್, ಕಿಶೋರ್ ಕುಮಾರ್, ಶಿವಾನಂದ, ಬಾಲರಾಜ್ ಶ್ರೇಷ್ಠಿ, ರಾಮಚಂದ್ರ, ನವೀನ್ ಕುಮಾರ್, ದುಗ್ಗೇಶ್, ಏಕಾಂತಪ್ಪ, ಸಾಂಬಾಜಿರಾವ್ ಪಾಲ್ಗೊಂಡಿದ್ದರು.