ಹೊನ್ನಾಳಿ ಸಾಸ್ವೆಹಳ್ಳಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯ ಪೂರ್ವಭಾವಿ ಸಭೆ ಹಾಗೂ ಎಸ್‌ಐಆರ್ ಜನ ಜಾಗೃತಿ ಅಭಿಯಾನದಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮಾತನಾಡಿದರು. ಶುಂಠಿ ಬಾಬು, ರೇಣು, ಶುಂಠಿ ರವಿ, ರಮೇಶ್ ಇತರರಿದ್ದರು. coercion 
ದಾವಣಗೆರೆ

ಸಾಮಾಜಿಕ ಭದ್ರತಾ ವೇತನ ಬಿಡುಗಡೆಗೆ ಆಗ್ರಹ coercion

ಚಂದನ ವಿ ಎಂ

ಪ್ರಮುಖ ಮುಖ್ಯಾಂಶಗಳು

  • ನಾಳೆ ಹೊನ್ನಾಳಿ ತಾಲೂಕು ಕಚೇರಿಗೆ ಮುತ್ತಿಗೆ
  • ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಎಚ್ಚರಿಕೆ
ಹೊನ್ನಾಳಿ: ರಾಜ್ಯ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆ ಹಾಗೂ ಸಾಮಾಜಿಕ ಭದ್ರತೆಯಡಿಯ ಸಂಧ್ಯಾ ಸುರಕ್ಷಾ, ವಿಧವಾ ವೇತನ ಮತ್ತು ಅಂಗವಿಕಲ ವೇತನವನ್ನು ಕಳೆದ ನಾಲ್ಕೈದು ತಿಂಗಳಿನಿಂದ ಅರ್ಹ ಫಲಾನುಭವಿಗಳಿಗೆ ನೀಡಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು. coercion
ತಾಲೂಕಿನ ಸಾಸ್ವೇಹಳ್ಳಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜು.8ರ ಪ್ರತಿಭಟನೆಯ ಪೂರ್ವಭಾವಿ ಸಭೆ ಹಾಗೂ ಎಸ್‌ಐಆರ್ ಜನಜಾಗೃತಿ ಅಭಿಯಾನದಲ್ಲಿ ಮಾತನಾಡಿದರು.
ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿದಾಗ ಗೃಹಲಕ್ಷ್ಮೀ ಹಾಗೂ ವಿವಿಧ ಮಾಸಾಶನ ನಂಬಿಕೊಂಡಿರುವ ಬಡ ಫಲಾನುಭವಿಗಳು ತಮಗಾಗುತ್ತಿರುವ ಅನ್ಯಾಯವನ್ನು ತೋಡಿಕೊಂಡಿದ್ದಾರೆ. ಪ್ರತಿ ತಿಂಗಳು ಬರುತ್ತಿದ್ದ ಹಣದಿಂದ ಮಾತ್ರೆ ಹಾಗೂ ಇತರ ಖರ್ಚುಗಳನ್ನು ನಿಭಾಯಿಸುತ್ತಿದ್ದ ನಮಗೆ, ಕಳೆದ ಮೂರು ತಿಂಗಳಿನಿಂದ ವೇತನ ಬಾರದೆ ತೀವ್ರ ತೊಂದರೆಯಾಗಿದೆ ಎಂದು ಬಡವರು ಅಳಲು ತೋಡಿಕೊಳ್ಳುತ್ತಿದ್ದಾರೆ. ಸರ್ಕಾರದ ಈ ಧೋರಣೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯುತ್ ಖಾಸಗೀಕರಣ ಕೈಬಿಡುವುದು, ಗೃಹಲಕ್ಷ್ಮೀ, ವಿಧವಾ ವೇತನ, ಸಂಧ್ಯಾ ಸುರಕ್ಷಾ ಹಾಗೂ ಅಂಗವಿಕಲ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬುಧವಾರ ಪಟ್ಟಣದ ಟಿ.ಬಿ. ವೃತ್ತದಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ತಾಲೂಕು ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳು, ರೈತರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಖಾಸಗೀಕರಣಕ್ಕೆ ವಿರೋಧ: ಸರ್ಕಾರವು ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ ಸೇರಿ ವಿವಿಧ ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ. ಖಾಸಗೀಕರಣದಿಂದ ವಿದ್ಯುತ್ ಬಿಲ್ ಹೆಚ್ಚಾಗುವುದಲ್ಲದೆ, ರೈತರ ಪಂಪ್‌ಸೆಟ್‌ಗಳಿಗೆ ನೀಡಲಾಗುತ್ತಿರುವ ಉಚಿತ ವಿದ್ಯುತ್ ಸೌಲಭ್ಯ ರದ್ದಾಗುವ ಆತಂಕವಿದೆ. ಅಲ್ಲದೆ, ಹಾಲಿ ಇರುವ ಹಲವು ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕುವ ಸದ್ದಿಲ್ಲದ ಸಂಚು ಇದರ ಹಿಂದಿದೆ ಎಂದು ರೇಣುಕಾಚಾರ್ಯ ದೂರಿದರು.
ಸಭೆಯಲ್ಲಿ ಮುಖಂಡರಾದ ಶುಂಠಿ ಬಾಬು, ರೇಣು, ಶುಂಠಿ ರವಿ, ರಮೇಶ್ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳು, ರೈತರು, ಪಕ್ಷದ ಕಾರ್ಯಕರ್ತರಿದ್ದರು.