ಚನ್ನಗಿರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶನಿವಾರ ಆಯೋಜಿಸಿದ್ದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಶ ಕೆ.ಪಿ. ಸಿದ್ದಪ್ಪಾಜಿ ಉದ್ಘಾಟಿಸಿದರು. ಎಲ್. ಜಯಪ್ಪ, ಎಚ್. ಮೋಹನ್, ಸಿ. ತಿಪ್ಪೇಶ್, ಆರ್. ನಾಗೇಶ್, ಎಲ್. ಸರಿತಾ ಇತರರಿದ್ದರು. education 
ದಾವಣಗೆರೆ

ಕೊಡಿಸಿ ಉತ್ತಮ ವಿದ್ಯಾಭ್ಯಾಸ education

ಚಂದನ ವಿ ಎಂ

ಪ್ರಮುಖ ಮುಖ್ಯಾಂಶಗಳು

  • ಪ್ರಧಾನ ಸಿವಿಲ್ ನ್ಯಾಯಾಧೀಶ ಸಿದ್ದಪ್ಪಾಜಿ ಸಲಹೆ
  • ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ
ಚನ್ನಗಿರಿ: ಮಕ್ಕಳು ನಮ್ಮ ಆಸ್ತಿ, ಓದುವ ವಯಸ್ಸಿನಲ್ಲಿ ದುಡಿಮೆಗೆ ಹಚ್ಚದೆ ವಿದ್ಯಾಭ್ಯಾಸ ಕೊಡಿಸಿ ಉತ್ತಮ ನಾಗರಿಕರನ್ನಾಗಿಸುವ ಜವಾಬ್ದಾರಿ ಪಾಲಕರ ಮೇಲಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಕೆ.ಪಿ. ಸಿದ್ದಪ್ಪಾಜಿ ಹೇಳಿದರು. education
ನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶನಿವಾರ ಶಿಕ್ಷಣ, ಕಾರ್ಮಿಕ ಇಲಾಖೆ, ಕಾನೂನು ಮತ್ತು ಸೇವಾ ಸಮಿತಿ, ವಕೀಲರ ಸಂಘ ಸಹಯೋಗದಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
16 ವರ್ಷದೊಳಗಿನ ಮಕ್ಕಳನ್ನು ಬಾಲಕಾರ್ಮಿಕರೆಂದು ಕರೆಯಲಾಗುತ್ತದೆ. ಮಕ್ಕಳು ಓದುವ ವಯಸ್ಸಿನಲ್ಲಿ ದುಡಿಮೆಗೆ ಹೋಗುವುದು ಅಪರಾಧವಾಗಿದೆ. ಮಕ್ಕಳನ್ನು ಕೆಲಸಕ್ಕೆ ಕಳುಹಿಸುವ ಮತ್ತು ಕೆಲಸಕ್ಕೆ ತೆಗೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜೂ.12ರಂದು ವಿಶ್ವದಾದ್ಯಂತ ಬಾಲಕಾರ್ಮಿಕ ವಿರೋಧಿ ದಿನ ಆಚರಿಸಲಾಗುತ್ತದೆ. ಈ ಕೆಟ್ಟ ಪದ್ಧತಿಯನ್ನು ತೊಡೆದು ಹಾಕಲು ಜನರು ಪಣ ತೊಡಬೇಕಾಗಿದೆ. ಶಿಕ್ಷಣ ಮೂಲಹಕ್ಕಾಗಿದ್ದು ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗಬಾರದು ಎಂದು ತಿಳಿಸಿದರು.
ಈ ಪದ್ಧತಿಯನ್ನು ಹೋಗಲಾಡಿಸುವ ಜತೆಗೆ ಇದರಿಂದಾಗುವ ದುಷ್ಪರಿಣಾಮದ ಕುರಿತು ಜಾಗೃತಿ ಮೂಡಿಸಬೇಕಿದೆ. ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಆಗ ಮಾತ್ರ ಈ ಪದ್ಧತಿ ಕಡಿಮೆಯಾಗಲಿದೆ ಎಂದರು.
ಬಿಇಒ ಎಲ್. ಜಯಪ್ಪ, ವಕೀಲರ ಸಂಘದ ಅಧ್ಯಕ್ಷ ಎಚ್. ಮೋಹನ್, ಉಪಾಧ್ಯಕ್ಷ ಸಿ. ತಿಪ್ಪೇಶ್, ಬಾಲಕಾರ್ಮಿಕ ಇಲಾಖೆ ಕಾರ್ಮಿಕ ನಿರೀಕ್ಷಕ ಆರ್. ನಾಗೇಶ್, ಸಹಾಯಕ ಸರ್ಕಾರಿ ಅಭಿಯೋಜಕಿ ಎಲ್. ಸರಿತಾ, ಮುಖ್ಯಶಿಕ್ಷಕ ಡಿ.ಎಚ್. ಪರಮೇಶ್ವರಪ್ಪ, ನ್ಯಾ. ಹನುಮಂತನಾಯ್ಕ ಇತರರಿದ್ದರು.