ಜಗಳೂರು ತಾಲೂಕಿನ ಮೆದಗಿನಕೆರೆ ಸಮೀಪದ ಮೊರಾರ್ಜಿ ದೇಸಾಯಿ ವಸತಿಯುತ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಾರದಾ ಪೂಜೆ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ನಿವೃತ್ತ ಉಪನ್ಯಾಸಕ ಡಿ.ಸಿ. ಮಲ್ಲಿಕಾರ್ಜುನ್ ಉದ್ಘಾಟಿಸಿದರು. ಆಂಜನೇಯ, ರೂಪಕಲಾ ಇದ್ದರು.Farewell 
ದಾವಣಗೆರೆ

ಜೀವನದಲ್ಲಿ ಇರಲಿ ನಿರ್ದಿಷ್ಟ ಗುರಿ Farewell

ಶೋಭಾ ಕೃಷ್ಣ ಗೌಡ

ಪ್ರಮುಖ ಮುಖ್ಯಾಂಶಗಳು

  • ನಿವೃತ್ತ ಉಪನ್ಯಾಸಕ ಡಿ.ಸಿ. ಮಲ್ಲಿಕಾರ್ಜುನ್ ಹೇಳಿಕೆ
  • ಶಾರದಾ ಪೂಜೆ
  • ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ಜಗಳೂರು: ವಿದ್ಯಾರ್ಥಿಗಳಲ್ಲಿ ಭವಿಷ್ಯದ ಕನಸುಗಳು ಇಲ್ಲದಿದ್ದರೆ ಜೀವನ ರೂಪಿಸಿಕೊಳ್ಳುವುದು ಅಸಾಧ್ಯ ಎಂದು ನಿವೃತ್ತ ಉಪನ್ಯಾಸಕ ಡಿ.ಸಿ. ಮಲ್ಲಿಕಾರ್ಜುನ್ ಹೇಳಿದರು.
ತಾಲೂಕಿನ ಮೆದಗಿನಕೆರೆ ಸಮೀಪದ ಮೊರಾರ್ಜಿ ದೇಸಾಯಿ ವಸತಿಯುತ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಾರದ ಪೂಜೆ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜೀವನದಲ್ಲಿ ಒಂದು ನಿರ್ದಿಷ್ಟ ಗುರಿ ಇರಬೇಕು. ಆ ಗುರಿಯ ಮೇಲೆ ಸಾಧಿಸುವ ಛಲವಿರಬೇಕು ಮತ್ತು ಕಠಿಣ ಪರಿಶ್ರಮ ಹಾಗೂ ಸಮಾಧಾನದಿಂದ ಮುನ್ನಡೆದರೆ ಯಶಸ್ಸು ಖಂಡಿತ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಭಿವೃದ್ಧಿ ಹೊಂದಲು ಒಂದು ಗುರಿ ಪ್ರೇರಣೆಯಾಗಿ ಕಾರ್ಯನಿರ್ವಹಿಸುತ್ತದೆ. ಶಿಕ್ಷಣ ಪ್ರತಿಯೊಬ್ಬ ವಿದ್ಯಾರ್ಥಿಯು ಪಡೆದುಕೊಳ್ಳಬಹುದಾದ ಮತ್ತು ಪಡೆದುಕೊಳ್ಳುತ್ತಿರುವ ಅಂಶವಾಗಿದೆ. ಹಾಗೇ ಭವಿಷ್ಯದಲ್ಲಿ ತಾವು ಏನಾಗಬೇಕು ಎಂಬುದನ್ನು ವಿದ್ಯಾರ್ಥಿಗಳು ನಿಗದಿಪಡಿಸಿಕೊಂಡರೆ ಉತ್ತಮ ಎಂದು ಸಲಹೆ ನೀಡಿದರು.
ಶಿಕ್ಷಣ ಇಲಾಖೆ ಸಿಆರ್‌ಪಿ ಆಂಜನೇಯ ಮಾತನಾಡಿ, ಜಗಳೂರು ತಾಲೂಕು ಬರಪೀಡಿತ ಪ್ರದೇಶವಾಗಿದ್ದು, ಇಲ್ಲಿನ ಮಕ್ಕಳು ಕಡಿಮೆ ಖರ್ಚಿನಲ್ಲಿ ಉತ್ತಮ ಶಿಕ್ಷಣ ಪಡೆಯಲಿ ಎಂಬ ಉದ್ದೇಶದಿಂದ ಸರ್ಕಾರ ವಸತಿ ಶಾಲೆಗಳನ್ನು ಪ್ರಾರಂಭಿಸಿದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಅವಶ್ಯಕವಾಗಿದ್ದು, ಶಿಕ್ಷಣ ಪಡೆದು ಉನ್ನತ ಸ್ಥಾನ ಅಲಂಕರಿಸಬೇಕು ಎಂದು ಹೇಳಿದರು.
ಪ್ರಾಚಾರ್ಯೆ ರೂಪಕಲಾ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿ ಕೊಳ್ಳುವ ಕಡೆ ಗಮನಹರಿಸಬೇಕು. ಪ್ರೌಢ ಶಿಕ್ಷಣ ಮುಗಿಸುವ ಹಂತದಲ್ಲಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಯಶಸ್ವಿಯಾದರೆ ಕಾಲೇಜು ಶಿಕ್ಷಣ ಸುಲಭವಾಗಲಿದೆ. ಪರೀಕ್ಷೆ ಭಯದಿಂದ ಹೊರ ಬಂದು ಈವರೆಗೆ ಕಲಿತಿದ್ದನ್ನು ಮನನ ಮಾಡಿಕೊಂಡು ಪ್ರಶ್ನೆಗಳನ್ನು ಅರ್ಥ ಮಾಡಿಕೊಂಡು ಉತ್ತರ ಬರೆಯಬೇಕು
ಎಂದರು.
ಇದೇ ವೇಳೆ ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಸಿಆರ್‌ಪಿಗಳಾದ ರಮೇಶ್, ತಿಮ್ಮೇಶ್, ಬಸವರಾಜ್, ಉಪ ಪ್ರಾಚಾರ್ಯ ನಾಜೀಯ, ಶಿಕ್ಷಕರಾದ ಪ್ರವೀಣ್ ಸೂರಣ್ಣನವರ್, ಸುರೇಶ್, ವೆಂಕಟೇಶ್, ರಾಘವೇಂದ್ರ, ಶೇಕರಪ್ಪ ಲಮಾಣಿ, ಶೈಲಜಾ, ಗೀತಾ, ಲತಾ, ಸ್ವಪ್ನಾ, ಸಿಬ್ಬಂದಿ ನಾಗರತ್ನಮ್ಮ, ರಾಕೇಶ್, ಸಂತೋಷ್ ಕುಮಾರ್, ರಾಕೇಶ್, ನಾಗರಾಜ್, ರಾಜೇಶ್ ಇದ್ದರು.