ಹರಿಹರ ನಗರದ ಕಾಟ್ವೆ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕ ಬಿ.ಪಿ. ಹರೀಶ್ ಉದ್ಘಾಟಿಸಿದರು. ಎಸ್. ರಾಮಪ್ಪ, ನಂದಿಗಾವಿ ಶ್ರೀನಿವಾಸ್, ಎಂ.ಎಸ್. ಆನಂದ್‌ಕುಮಾರ್ ಇತರರಿದ್ದರು.developmental 
ದಾವಣಗೆರೆ

ಶೈಕ್ಷಣಿಕ ಅಭಿವೃದ್ಧಿ ಗುರಿಯಾಗಲಿ developmental

ಶೋಭಾ ಕೃಷ್ಣ ಗೌಡ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಬಿ.ಪಿ.ಹರೀಶ್ ಅಭಿಪ್ರಾಯ
  • ಪ್ರತಿಭಾ ಪುರಸ್ಕಾರ ಕಾರ‌್ಯಕ್ರಮ
ಹರಿಹರ: ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದ್ದಲ್ಲಿ ಮಾತ್ರ ಎಲ್ಲವನ್ನೂ ಸಂಪಾದಿಸಲು ಸಾಧ್ಯ ಎಂದು ಶಾಸಕ ಬಿ.ಪಿ. ಹರೀಶ್ ತಿಳಿಸಿದರು. developmental
ಮಾದರ ಚನ್ನಯ್ಯ ಜಯಂತಿ ಅಂಗವಾಗಿ ತಾಲೂಕು ಮಾದಿಗ ಸಮಾಜದ ವತಿಯಿಂದ ನಗರದ ಕಾಟ್ವೆ ಸಮುದಾಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ, ಬಡ ವಿದ್ಯಾರ್ಥಿಗಳಿಗೆ ಉಚಿತ ಕಿಟ್ ವಿತರಣೆ ಹಾಗೂ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಲ್ಲ ಹಕ್ಕುಗಳನ್ನು ನೀಡಿದ್ದು, ಅದರ ಸಮಗ್ರ ಲಾಭ ಪಡೆಯಲು ಪ್ರತಿಯೊಬ್ಬರೂ ಸುಶಿಕ್ಷಿತರಾಗಬೇಕು ಎಂದರು.
ಮಾದಿಗ ಸಮಾಜದ ತಾಲೂಕಾಧ್ಯಕ್ಷ ಎಂ.ಎಸ್. ಆನಂದಕುಮಾರ್ ಮಾತನಾಡಿ, ಕಳೆದ 7 ವರ್ಷಗಳಿಂದ ಈ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಈ ವರ್ಷ 2024-25 ಹಾಗೂ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ. 75ಕ್ಕೂ ಹೆಚ್ಚು ಅಂಕ ಗಳಿಸಿದ 65 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಿ, 300 ಬಡ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಿಸಲಾಗಿದೆ ಎಂದರು.
ಹೊನ್ನಾಳಿಯ ವಕೀಲ ಎಂ.ಸಿ. ಮೋಹನ್‌ಕುಮಾರ್ ಅವರು ‘ಒಳಮೀಸಲಾತಿ, ಶಿಕ್ಷಣ ಮತ್ತು ಉದ್ಯೋಗ’ ಕುರಿತು ಉಪನ್ಯಾಸ ನೀಡಿದರು. ನಿವೃತ್ತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರವಿನಾರಾಯಣ್ ಶಿಕ್ಷಣದ ಮಹತ್ವ ತಿಳಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎ.ಕೆ. ಭೂಮೇಶ್ ಪ್ರಾಸ್ತಾವಿಕ ನುಡಿದರು.
ರಾಜ್ಯ ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಚ್. ಮರಿಯೋಜಿರಾವ್ ಶಾಲಾ ಮಕ್ಕಳಿಗೆ ಶೈಕ್ಷಣಿಕ ಕಿಟ್‌ಗಳನ್ನು ವಿತರಿಸಿದರು. ಮಾಜಿ ಶಾಸಕ ಎಸ್. ರಾಮಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎನ್.ಎಚ್. ಶ್ರೀನಿವಾಸ್ ನಂದಿಗಾವಿ, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಹಾಲೇಶಗೌಡ್ರು ಹಾಗೂ ತಾಲೂಕು ಮಾದಿಗ ಸಮಾಜದ ಗೌರವಾಧ್ಯಕ್ಷ ಎಲ್.ಬಿ. ಹನುಮಂತಪ್ಪ, ಎಲ್‌ಐಸಿ ನಿವೃತ್ತ ಅಧಿಕಾರಿ ಎಂ.ಬಿ. ಧರ್ಮದತ್, ಉಪಾಧ್ಯಕ್ಷರಾದ ಹನುಮಂತಪ್ಪ ದೊಡ್ಮನೆ ಹಳ್ಳಿಹಾಳ್ ಇತರರಿದ್ದರು.