ಹರಿಹರ ತಾಲೂಕು ಗುತ್ತೂರಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಶಾಸಕ ಬಿ.ಪಿ. ಹರೀಶ್ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ ವಿತರಿಸುವ ಮೂಲಕ ಚಾಲನೆ ನೀಡಿದರು. ಬಿಇಒ ಡಿ. ದುರುಗಪ್ಪ, ಶಿಕ್ಷಕರ ಸಂದ ಅಧ್ಯಕ್ಷ ವೀರಣ್ಣ ಇತರರಿದ್ದರು. 
ದಾವಣಗೆರೆ

ಪಾಲಕರೆ ಖಾಸಗಿ ಶಾಲೆ ವ್ಯಾಮೋಹ ತ್ಯಜಿಸಿ

ಚಂದನ ವಿ ಎಂ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಬಿ.ಪಿ. ಹರೀಶ್ ಹೇಳಿಕೆ
  • ಶಾಲಾ ಪ್ರಾರಂಭೋತ್ಸವ
ಹರಿಹರ: ಪಾಲಕರು ಖಾಸಗಿ ಶಾಲೆ ವ್ಯಾಮೋಹ ಬಿಟ್ಟು ಗುಣಮಟ್ಟದ ಶಿಕ್ಷಣ ಸಿಗುವ ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ಮಕ್ಕಳನ್ನು ದಾಖಲಿಸಿ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.
ತಾಲೂಕಿನ ಗುತ್ತೂರು ಗ್ರಾಮದಲ್ಲಿ ಸೋಮವಾರ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ನುರಿತ ಹಾಗೂ ಅನುಭವಿ ಶಿಕ್ಷಕರಿದ್ದಾರೆ, ಗುಣಮಟ್ಟದ ಶಿಕ್ಷಣ ದೊರೆಯುತ್ತದೆ. ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಎಂದರು.
ಸರ್ಕಾರಿ ಶಾಲೆಗಳಲ್ಲಿ ಪಠ್ಯ ಪುಸ್ತಕ ಸೇರಿದಂತೆ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳನ್ನು, ಬಿಸಿಯೂಟ ನೀಡುತ್ತಿದೆ. ಸರ್ಕಾರಿ ಶಾಲೆಯಲ್ಲಿ ಓದಿದ ಅನೇಕರು ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಾಧನೆ ಮಾಡಿದ್ದಾರೆ. ಇಲ್ಲಿ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಯ ಜತೆ ಸಮಸ್ಯೆಗಳನ್ನು ಎದುರಿಸುವ ಆತ್ಮ ವಿಶ್ವಾಸ ಹೊಂದುವರು. ಮಕ್ಕಳಿಗೆ ಉತ್ತಮ ಶಿಕ್ಷಣ, ಮಾರ್ಗದರ್ಶನ ಮಾಡುವ ಹೊಣೆ ಶಿಕ್ಷಕರ ಮೇಲಿದೆ ಎಂದರು. ತಾಲೂಕಿನ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಪಠ್ಯ ಪುಸ್ತಕ, ಸಮವಸ ವಿತರಿಸಲಾಯಿತು. ಪ್ರಾರಂಭೋತ್ಸವದ ಹಿನ್ನೆಲೆ ಎಲ್ಲ ಶಾಲೆಗಳಲ್ಲಿ ಸಿಹಿಯೂಟ ಮಾಡಿಸಲಾಗಿತ್ತು.