ಜಿಲ್ಲೆ

ರಾಜ್ಯಪಾಲರ ಮೇಲೆ ಕೇಂದ್ರದ ಒತ್ತಡ ಸಂಸದೆ ಪ್ರಭಾ ಪ್ರತಿಕ್ರಿಯೆ

ಡಿ. ಎಂ. ಮಹೇಶ್

ದಾವಣಗೆರೆ: ಸಿಎಂ ವಿರುದ್ಧ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ಯಾವ ರೀತಿಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ ಎಂಬುದು ತಿಳಿದಿಲ್ಲ. ಕೇಂದ್ರದಿಂದ ಅವರಿಗೆ ಒತ್ತಡ ಇರುವುದು ಸ್ಪಷ್ಟವಾಗಿದೆ. ರಾಜ್ಯಪಾಲರ ಭವನ ರಾಜಕೀಯ ನಿವಾಸವಾಗುತ್ತಿದೆ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಪ್ರತಿಕ್ರಿಯಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಮೌಖಿಕವಾಗಿ, ಪತ್ರ ವ್ಯವಹಾರ ಮಾಡಿಲ್ಲ. ಈ ಬಗ್ಗೆ ಕಾಂಗ್ರೆಸ್, ರಾಜ್ಯಪಾಲರಿಗೆ ಉತ್ತರ ಕೊಟ್ಟಿದ್ದೆವು. ಶೋಕಾಸ್ ನೋಟಿಸ್‌ಗೆ ಎಳೆಎಳೆಯಾಗಿ ಉತ್ತರ ಕೊಟ್ಟಿದ್ದೆವು. ಆದರೂ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ರಾಜ್ಯಪಾಲರ ಕಚೇರಿ ದುರ್ಬಳಕೆ ಆಗಿದೆ.
ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಬಿಜೆಪಿಯವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಲ್ಲದ ಬಿಜೆಪಿ ಸಂವಿಧಾನಬಾಹಿರ ಕೆಲಸದಲ್ಲಿ ತೊಡಗಿದೆ. ಈ ವಿಚಾರದಲ್ಲಿ ಕಾನೂನು ಹೋರಾಟ ಅನಿವಾರ್ಯವಾಗಿದ್ದು, ಇದರ ರೂಪರೇಷೆಗಳ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.