ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ ಆ. 19 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ( ಕೊಠಡಿ ಸಂಖ್ಯೆ-51) ದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ವಾಕ್ ಇನ್ ಇಂಟರ್‌ವ್ಯೆನಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪಿಯು ಮತ್ತು ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಕನಿಷ್ಠ 4 ಬಯೋಡೇಟಾ ಮತ್ತು ಆಧಾರ್ ನಂಬರ್‌ನೊಂದಿಗೆ ಹಾಜರಾಗಬೇಕು. ಮಾಹಿತಿಗೆ ಮೊ.ಸಂ.8105122556, 08192-259446 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.