ದಾವಣಗೆರೆ: ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಸ್ಥಾನದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್. ರಾಜಶೇಖರ್ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚುನಾವಣೆಯಲ್ಲಿ ಪಕ್ಷದ ಎಲ್ಲ ಸದಸ್ಯರಿಗೂ ವಿಪ್ ನೀಡಲಾಗುವುದು. ಖಂಡಿತ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.
ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 22 ಸದಸ್ಯ ಬಲ ಹೊಂದಿದ್ದು, ಕಾಂಗ್ರೆಸ್‌ನಲ್ಲಿ ಎಂಎಲ್‌ಸಿಗಳೂ ಸೇರಿ 24 ಸದಸ್ಯರಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದರು.