ಜಿಲ್ಲೆ

ಛಲವಾದಿ ಸಮಾಜದ ಪ್ರತಿಭಾ ಪುರಸ್ಕಾರ ನಾಳೆ

ಡಿ. ಎಂ. ಮಹೇಶ್

ದಾವಣಗೆರೆ: ಛಲವಾದಿ ಸಮಾಜದ ಪ್ರತಿಭಾನ್ವಿತ ಮಕ್ಕಳಿಗೆ ಇಲ್ಲಿನ ಎಸ್.ಎಸ್. ಮಲ್ಲಿಕಾರ್ಜುನ ಸಾಂಸ್ಕೃತಿಕ ಭವನದಲ್ಲಿ ಜು. 28ರಂದು ಬೆಳಗ್ಗೆ 11 ಗಂಟೆಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.
ಎಸ್ಸೆಸ್ಸೆಲ್ಸಿಯ 38 ಹಾಗೂ ದ್ವಿತೀಯ ಪಿಯುನಲ್ಲಿ ಹೆಚ್ಚು ಅಂಕ ಪಡೆದ 28 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಎನ್.ರುದ್ರಮುನಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮೈಸೂರಿನ ಉರಿಲಿಂಗ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಉದ್ಘಾಟಿಸುವರು. ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಸನ್ಮಾನಿಸಲಾಗುವುದು.
ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹಾದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ,, ಮಾಜಿ ಶಾಸಕ ನೆಹರು ಚ. ಓಲೇಕಾರ, ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಡಿ.ಜಿ. ಶಾಂತನಗೌಡ, ಬಿ.ಪಿ. ಹರೀಶ್, ಬಿ.ದೇವೇಂದ್ರಪ್ಪ, ಕೆ.ಎಸ್. ಬಸವಂತಪ್ಪ, ಬಸವರಾಜ್ ಶಿವಗಂಗಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಸ್. ವಿಜಯಕುಮಾರ್,  ಜಿಲ್ಲಾಧಿಕಾರಿ ಡಾ.ಜಿ.ಎಂ. ಗಂಗಾಧರಸ್ವಾಮಿ, ಎಸ್ಪಿ ಉಮಾ ಪ್ರಶಾಂತ್, ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್, ಐಆರ್‌ಎಸ್ ಚೇತನ ಕೃಷ್ಣ5, ಬಿಐಇಟಿ ಪ್ರಾಂಶುಪಾಲ ಎಚ್.ಬಿ. ಅರವಿಂದ್, ಎಎಸ್ಪಿ ವಿಜಯಕುಮಾರ್ ಎಂ. ಸಂತೋಷ್ ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಹಾಸಭಾದ ಎಸ್.ಶೇಖರಪ್ಪ, ಜಯಣ್ಣ, ನಾಗಭೂಷಣ್, ಎಸ್.ಎನ್. ಬಸವರಾಜ್,ಕೊಟ್ರಬಸಪ್ಪ, ಪಕೀರಪ್ಪ, ಈಶ್ವರಪ್ಪ, ಮಂಜುನಾಥ್ ಇದ್ದರು.