ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರದ ಎದುರು ಮೋಂಬತ್ತಿ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಅಂಬೇಡ್ಕರ್ ಅವರ ಕುರಿತು ಸಂವಿಧಾನದ ಕುರಿತು ಮಾತನಾಡಿದರು. ಅಂಬೇಡ್ಕರ್ ವ್ಯಕ್ತಿತ್ವದ ಕುರಿತು ಗುಣಗಾನ ಮಾಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲ ಗುರುಮೂರ್ತಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬದುಕು ಸಾಧನೆಗಳ ಕುರಿತು ಮಾತನಾಡಿದರು.