ಶಿವಮೊಗ್ಗ: ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ನಿಮಿತ್ತ ಜಿಲ್ಲಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧಗೊಳಿಸಿ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಆದೇಶಿಸಿದ್ದಾರೆ.
ಗಣೇಶ ಹಬ್ಬದ ಆಚರಣೆ ಪ್ರಯುಕ್ತ ವಿವಿಧ ದಿನಾಂಕಗಳಂದು ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸೆ.18ರಿಂದ ಗಣೇಶೋತ್ಸವ ಆಚರಣೆಗಳು ಪೂರ್ಣಗೊಳ್ಳುವವರೆಗೆ ಹಾಗೂ ಸೆ.28ರಿಂದ 30ರವರೆಗೆ ಈದ್ ಮಿಲಾದ್ ಹಬ್ಬದ ಆಚರಣೆಗಳು ಪೂರ್ಣಗೊಳ್ಳುವವರೆಗೆ ಡಿಜೆ ನಿಷೇಧಿಸಲಾಗಿದೆ.