ಕಾರವಾರ: ಜಿಲ್ಲೆಯ ಎಲ್ಲ ವಿದ್ಯಾ ಸಂಸ್ಥೆಗಳು, ವಿದ್ಯಾರ್ಥಿನಿಲಯಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿಯ 20 ಅಂಶಗಳ ತತ್ವಗಳನ್ನು ತಪ್ಪದೇ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಽಕಾರಿ ಲಕ್ಷ್ಮೀಪ್ರಿಯಾ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಭೆಯಲ್ಲಿ ಅವರು ಮಾತನಾಡಿದರು. ಮಕ್ಕಳ ಸುರಕ್ಷತೆ ಕುರಿತಂತೆ ನಿಯಮಿತವಾಗಿ ಸಭೆಗಳನ್ನು ನಡಿಸಿ, ಎಲ್ಲ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಶಾಲಾ ಆವರಣದಲ್ಲಿ ಸಿಸಿಟಿವಿಗಳ ಅಳವಡಿಕೆ, ಮಕ್ಕಳ ದೂರು ಪೆಟ್ಟಿಗೆ ಅಳವಡಿಕೆ, ಮಕ್ಕಳ ಹಕ್ಕುಗಳಿಗೆ ಸಂಬಂದಪಟ್ಟ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು ಎಂದರು. ಗ್ರಾಮಸಭೆಗಳು, ಶಾಲಾ ಸಲಹಾ ಪೆಟ್ಟಿಗೆ ಯಲ್ಲಿ ಸಲ್ಲಿಕೆಯಾಗುವ ಮಕ್ಕಳ ದೂರುಗಳನ್ನು ಕಡ್ಡಾಯವಾಗಿ ಗಂಭೀರವಾಗಿ ಪರಿಗಣಿಸಿ, ಆ ಸಮಸ್ಯೆಗಳನ್ನು ನಿವಾರಣೆ ಮಾಡುವಲ್ಲಿ ಸಂಬಂದಪಟ್ಟ ಇಲಾಖೆಗಳು ಅತ್ಯಂತ ಪರಿಣಾಮಕಾರಿಯಗಿ ಕಾರ್ಯನಿರ್ವಹಿಸಬೇಕು ಎಂದರು.
ತರಬೇತಿ ನಿರತ ಐಎಎಸ್ ಅಧಿಕಾರಿ ಝೂಫಿಶಾನ್ ಹಕ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅಲ್ಲಾ ಭಕ್ಷ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ಮಕ್ಕಳ ರಕ್ಷಣಾಽಕಾರಿ ಸೋನಲ್ ಐಗಳ್, ಜಿಲ್ಲಾ ಆರ್‌ಸಿಎಚ್ ಅಽಕಾರಿ ಡಾ.ನಟರಾಜ್ , ಡಿವೈಎಸ್‌ಪಿ ಗಿರೀಶ್ ಇದ್ದರು.