ಪ್ರಮುಖ ಮುಖ್ಯಾಂಶಗಳು
ನಗರದ ಪುರಭವನದಲ್ಲಿ
ಮಂಗಳವಾರ ನಡೆದ ಜಿಲ್ಲಾ ಮಟ್ಟದ ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು. ಮಕ್ಕಳಲ್ಲಿ ಶಿಕ್ಷಣ ಜಾಗೃತಿ, ಪ್ರೀತಿಯ ಕುಟುಂಬದ ವಾತಾವರಣ, ಕಠಿಣ ಕಾನೂನುಗಳು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವ ಮೂಲಕ ಮಾದಕ ವ್ಯಸನವನ್ನು ತಡೆಗಟ್ಟಬಹುದು ಎಂದರು.
ಮಕ್ಕಳ ಚಲನವಲನಗಳ ಬಗ್ಗೆ ಪೋಷಕರು ಹಾಗೂ ಶಿಕ್ಷಕರು ನಿಗಾವಹಿಸಬೇಕು. ಇಲ್ಲವಾದರೆ ಕುಟುಂಬದ ಸ್ವಾಸ್ಥ್ಯ ಹಾಳಾಗಲು ಪ್ರಾರಂಭವಾಗುತ್ತದೆ. ಮಕ್ಕಳು ಸಾಮಾಜಿಕವಾಗಿ ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಸಾಧ್ಯವಾಗುವುದಿಲ್ಲ. ಈ ಬಗ್ಗೆ ಪೋಷಕರು, ಶಾಲಾ-ಕಾಲೇಜುಗಳು ಹಾಗೂ ಹಾಸ್ಟೆಲ್‌ಗಳಲ್ಲಿ ಮಕ್ಕಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾತನಾಡಿ, ಮಾದಕ ವ್ಯಸನವು ವ್ಯಕ್ತಿಯ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಜೀವನವನ್ನು ನಾಶಪಡಿಸುವ ಒಂದು ಗಂಭೀರ ಪಿಡುಗು. ಎಲ್ಲ ಕಾಲೇಜುಗಳಲ್ಲಿ ಪ್ರತಿ ತಿಂಗಳಿಗೊಮ್ಮೆ ತಪಾಸಣೆ ನಡೆಸಿ ಕೌನ್ಸಿಲಿಂಗ್ ನಡೆಸುವುದರೊಂದಿಗೆ, ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಉಪ ಪೊಲೀಸ್ ಆಯುಕ್ತ ಮಿಥುನ್ ಎಚ್.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಉಪಸ್ಥಿತರಿದ್ದರು.