ಮಂಡ್ಯ: ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜಸ್ತಂಭದ ವಿವಾದಕ್ಕೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳು ಫೆ.7 ಹಾಗೂ 9ರಂದು ಮಂಡ್ಯ ಬಂದ್ ನಡೆಸದಂತೆ ಜಿಲ್ಲಾಧಿಕಾರಿ ಡಾ.ಕುಮಾರ ಮನವಿ ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎರಡು ಸಂಘನೆಗಳ ಪ್ರತ್ಯೇಕ ಸಭೆಯಲ್ಲಿ ಮಾತನಾಡಿದ ಅವರು, ಬಂದ್ ಮಾಡುವುದರಿಂದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ, ಅಂಗಡಿ ಮುಂಗಟ್ಟುಗಳ ವ್ಯಾಪಾರಕ್ಕೆ ತೊಂದರೆಯಾಗಲಿದೆ. ಆದ್ದರಿಂದ ಎರಡು ಸಂಘಟನೆಗಳು ಬಂದ್ ಹಿಂಪಡೆಯುವಂತೆ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಇದ್ದರು.