ಜಿಲ್ಲೆ

ಕಕ ಉತ್ಸವ ವ್ಯವಸ್ಥಿತವಾಗಿ ಆಯೋಜಿಸಿ, ಡಿಸಿ ನಲಿನ್​ ಅತುಲ್​ ಸೂಚನೆ

ಕೊಪ್ಪಳ: ಕಲ್ಯಾಣ ಕರ್ನಾಟಕ ಉತ್ಸವ ಸೆ.17ರಂದು ಇದ್ದು, ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ನಲಿನ್​ ಅತುಲ್​ ಅಧಿಕಾರಿಗಳಿಗೆ ಸೂಚಿಸಿದರು.

ಉತ್ಸವ ಅಂಗವಾಗಿ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದರು.

ಅಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನ ಆವರಣ, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಇರಲಿದೆ. ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮಕ್ಕೆ ಹಾಜರಾಗಬೇಕು. ಪ್ರಮುಖ ರಸ್ತೆಗಳು, ವೃತ್ತಗಳನ್ನು ಸ್ವಚ್ಛಗೊಳಿಸಿ ಅಲಂಕಾರ ಮಾಡಿ. ಕ್ರೀಡಾಂಗಣದಲ್ಲಿ ಕುಡಿವ ನೀರು ವ್ಯವಸ್ಥೆ ಮಾಡಿ. ಪರೇಡ್​ನಲ್ಲಿ ಭಾಗಿಯಾಗುವ ಮಕ್ಕಳಿಗೆ ತರಬೇತಿ ಹಾಗೂ ಕ್ರೀಡಾಂಗಣದಲ್ಲಿ ಉಪಾಹಾರ ನೀಡಿ. ವಿವಿಧ ಸಮಿತಿಗಳು ನಿಮ್ಮ ಕರ್ತವ್ಯ ಸರಿಯಾಗಿ ನಿಭಾಯಿಸಿ. ಸಾಂಸತಿಕ ಕಾರ್ಯಕ್ರಮಗಳಲ್ಲಿ ಸರ್ಕಾರಿ ಶಾಲಾ, ಕಾಲೇಜು ಮಕ್ಕಳಿಗೆ ಆದ್ಯತೆ ನೀಡಿ. ಕ್ರೀಡಾಂಗಣಕ್ಕೆ ಮಕ್ಕಳನ್ನು ಕರೆತಂದು ಬಿಡಲು ಬಸ್​ ಕಲ್ಪಿಸಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ, ಎಡಿಸಿ ಸಿದ್ರಾಮೇಶ್ವರ, ಎಎಸ್ಪಿ ಹೇಮಂತ್​ ಕುಮಾರ್​, ಉಪ ವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ, ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಡಿಯುಡಿಸಿ ಪಿಡಿ ರೇಷ್ಮಾ ಹಾನಗಲ್​, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ, ತಹಸೀಲ್ದಾರ್​ ವಿಠ್ಠಲ ಚೌಗಲಾ ಇತರರಿದ್ದರು.