ವಿಜಯಪುರ: ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೂ. 15 ರಿಂದ 17ರ ವರೆಗೆ ನಡೆಯಲಿರುವ ಪ್ರಸಕ್ತ 2024&25ನೇ ಸಾಲಿನ ರಾಜ್ಯ ಪ್ರಾಥಮಿಕ ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರುಗಳ ತತ್ಸಮಾನ ವೃಂದದ ರ್ನಿದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ, ಕೇಂದ್ರ ವ್ಯಾಪ್ತಿಯ 200 ಮೀ ವ್ಯಾಪ್ತಿಯಲ್ಲಿ ನಿಷೇಧಾೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಆದೇಶ ಹೊರಡಿಸಿದ್ದಾರೆ.
ಬೆಳಗ್ಗೆ 9 ರಿಂದ ಪರೀಕ್ಷೆ ಮುಗಿಯುವವರೆಗೂ ನಿಷೇಧಾೆ ಮುಂದುವರಿಯಲಿದೆ. ಪರೀಕ್ಷೆ ಕೇಂದ್ರ ಬಳಿಯ ಝರಾಕ್ಸ್ ಅಂಗಡಿ, ಕಂಪ್ಯೂಟರ್ ಸೆಂಟರ್, ಸೈಬರ್ ಕೆಫೆ, ಕೋಚಿಂಗ್ ಕೇಂದ್ರಗಳು ಪರೀಕ್ಷೆ ವೇಳೆಯಲ್ಲಿ ತೆರೆಯದಂತೆ ಸೂಚಿಸಲಾಗಿದೆ. ಅಲ್ಲದೆ, ಪರೀಕ್ಷೆ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು ಇತರರು ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.