ಜಿಲ್ಲೆ

ಮಕ್ಕಳ ಮೇಲಿನ ದೌರ್ಜನ್ಯ ತಡೆಯಿರಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ನಿರ್ದೇಶನ

Tumakuru

ತುಮಕೂರು : ಜಿಲ್ಲೆಯಲ್ಲಿ ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ, ವಾನಸಿಕ ಕಿರುಕುಳ ಸೇರಿ ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಯಾವುದೇ ಪ್ರಕರಣಗಳು ನಡೆಯದಂತೆ ಕ್ರಮ ಕೈಗೊಂಡು ಮಕ್ಕಳ ರಕ್ಷಣೆಗೆ ಆದ್ಯತೆ ಕೊಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸಮಗ್ರ ಮಕ್ಕಳ ರಕ್ಷಣಾ ಯೋಜನೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹೆಚ್ಚು ಬಾಲ್ಯವಿವಾಹ ನಡೆಯುವ ಪ್ರದೇಶಗಳನ್ನು ಗುರುತಿಸಿ ಆ ಪ್ರದೇಶಗಳಲ್ಲಿ ಹೆಚ್ಚು ಅರಿವು ಮೂಡಿಸುವ ಮೂಲಕ ಸಾಮಾಜಿಕ ಸಮಸ್ಯೆಗೆ ಕಡಿವಾಣ ಹಾಕಬೇಕು ಎಂದರು.

ಮಕ್ಕಳ ಹಿತದೃಷ್ಟಿಯಿಂದ ಶಾಲಾ ಕಟ್ಟಡಗಳಲ್ಲಿ ಮಕ್ಕಳಿಗೆ ಅಪಾಯದಂತಿರುವ ವಿದ್ಯುತ್ ಕಂಬ ಹಾಗೂ ಶಾಲಾ ಕಟ್ಟಡಗಳ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿಗಳನ್ನು ತೆರವುಗೊಳಿಸಬೇಕು ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ಮಕ್ಕಳನ್ನು ಬಳಸಿಕೊಂಡು ಭಿಕ್ಷಾಟನೆ ವಾಡುತ್ತಿರುವವರ ಸಂಖ್ಯೆ ಹೆಚ್ಚು ಕಂಡುಬರುತ್ತಿದ್ದು, ಭಿಕ್ಷಾಟನೆಯಲ್ಲಿ ತೊಡಗಿರುವ ಮೇಲೆ ದಾಳಿ ನಡೆಸಿ ಅವರನ್ನು ಹತ್ತಿರದ ಸಾಂತ್ವನ ಕೇಂದ್ರಗಳಿಗೆ ಸೇರಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಮಸ್ಯೆ ಹಾಗೂ ಸಹಾಯಕ್ಕಾಗಿ ಮಕ್ಕಳ ಸಹಾಯವಾಣಿಗೆ ಕರೆ ವಾಡಿದ ಮಕ್ಕಳ ಸಂಪೂರ್ಣ ವಾಹಿತಿಯನ್ನು ಸಂಬಂಧಿಸಿದ ಇಲಾಖೆಗಳಿಗೆ ವರ್ಗಾಯಿಸಬೇಕು. ಸಂಬಂಧಿಸಿದ ಇಲಾಖಾಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ದೂರುಗಳನ್ನು ಆಧರಿಸಿ ಮಕ್ಕಳನ್ನು ಭೇಟಿ ವಾಡಿ ಪರಿಶೀಲನೆ ನಡೆಸಿ ರಕ್ಷಣೆಗೆ ಕ್ರಮ ವಹಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಕರೊನಾ ಹಾಗೂ ಇತರ ಕಾರಣದಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳ ರಕ್ಷಣೆ ಮತ್ತು ಪಾಲನೆಗೆ ಒತ್ತು ಕೊಡಬೇಕು. ಪೋಷಕರನ್ನು ಕಳೆದುಕೊಂಡ ಅನಾಥ ಮಕ್ಕಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸಮಗ್ರವಾಗಿ ತಲುಪಿಸಬೇಕು. ಅವರ ಶಿಕ್ಷಣದ ಭವಿಷ್ಯಕ್ಕೂ ಆದ್ಯತೆ ಕೊಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್, ಸವಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇವಾ ಮತ್ತಿತರರು ಇದ್ದರು.

ಪ್ರಕರಣ ಶೀಘ್ರ ವಿಲೇವಾರಿ ಮಾಡಿ : ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದಾಖಲಾದ ಪ್ರಕರಣಗಳನ್ನು ಶ್ರೀ ವಿಲೇವಾರಿ ವಾಡಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಜಿಪಂ ಸಿಇಒ ಡಾ.ಕೆ.ವಿದ್ಯಾಕುವಾರಿ ನಿರ್ದೇಶಿಸಿದರು.

ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ವಾಸಂತಿ ಉಪ್ಪಾರ್, ಜಿಲ್ಲೆಯಲ್ಲೆ ಬಾಲ್ಯ ವಿವಾಹ, ಪೋಕ್ಸೋ, ಲೈಂಗಿಕ ದೌರ್ಜನ್ಯ, ವಾನಸಿಕ ಕಿರುಕುಳ ಸೇರಿ ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದಾಖಲಾದ ಪ್ರಕರಣಗಳು ಹಾಗೂ ಮಕ್ಕಳ ರಕ್ಷಣೆಗೆ ಕೈಗೊಂಡಿರುವ ಬಗ್ಗೆ ಸಭೆಗೆ ವಾಹಿತಿ ಒದಗಿಸಿದರು.

ಸಭೆ ಮುಕ್ತಾಯದ ಬಳಿಕ ಜಿಲ್ಲಾ ಮಕ್ಕಳ ರಕ್ಷಣಾ ಟಕದಿಂದ ಹೊರ ತರಲಾಗಿರುವ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ವಿವರ ಕರಪತ್ರ ಹಾಗೂ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ಸಂರಕ್ಷಣಾ ಕಾಯ್ದೆ2021ರ ಕುರಿತ ಕರಪತ್ರ ಬಿಡುಗಡೆ ಮಾಡಲಾಯಿತು.