ಇಂಡಿ ತಾಲೂಕು ಕೇಂದ್ರದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ವಿವಿಧ ಕಾಮಗಾರಿ ಪರಿಶೀಲಿಸಿದರು. ಉಪವಿಭಾಗಾಧಿಕಾರಿ ಆಬೀದ್ ಗದ್ಯಾಳ, ತಹಸೀಲ್ದಾರ್ ಬಿ.ಎಸ್.ಕಡಕಬಾವಿ ಮತ್ತಿತರರಿದ್ದಾರೆ.  
ಜಿಲ್ಲೆ

ಇಂಡಿ ತಾಲೂಕು ಕಚೇರಿಗೆ ಡಿಸಿ ಟಿ.ಭೂಬಾಲನ್ ಭೇಟಿ-ಪರಿಶೀಲನೆ

ವಿಜಯಪುರ: ಇಂಡಿ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಶುಕ್ರವಾರ ಭೇಟಿ ನೀಡಿ ತಾಲೂಕು ಆಡಳಿತದ ಕಾರ್ಯನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು.

ತಹಸೀಲ್ದಾರ್ ಕಚೇರಿಯ ಬಾಕಿ ಕಡತಗಳ ಪರಿಶೀಲನೆ, ಆಧಾರ್ ನೋಂದಣಿ, ಭೂಮಿ ಪ್ರಗತಿ, ಮೋಜಣಿ ಕಡತ, ದಾಖಲೆಗಳನ್ನು ಆಧಾರ್‌ದೊಂದಿಗೆ ಜೋಡಣೆ ಪ್ರಗತಿ ಮಾಹಿತಿ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. ಇಂಡಿ ಮೆಘಾ ಮಾರುಕಟ್ಟೆ ಕಾಮಗಾರಿ ಪರಿಶೀಲನೆ ನಡೆಸಿದ ಅವರು, ರಸ್ತೆ ಅಭಿವೃದ್ಧಿ ಹಾಗೂ ಪಾರ್ಕಿಂಗ್ ವ್ಯವಸ್ಥೆ ಕುರಿತು ವೀಕ್ಷಿಸಿದರು. ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಉಪವಿಭಾಗಾಧಿಕಾರಿ ಆಬೀದ್ ಗದ್ಯಾಳ, ತಹಸೀಲ್ದಾರ್ ಬಿ.ಎಸ್.ಕಡಕಬಾವಿ, ಪುರಸಭೆಯ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಇತರರು ಉಪಸ್ಥಿತರಿದ್ದರು.