ಜಿಲ್ಲೆ

ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಕ್ಕೆ ಡಿಸಿ ಭೇಟಿ

ಎಂ.ರವಿ

ಪಾಂಡವಪುರ: ತಾಲೂಕಿನ ಡಿಂಕಾ ಗ್ರಾಮದಲ್ಲಿ ನೂತನವಾಗಿ ತೆರೆಯಲಾಗುತ್ತಿರುವ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ್ ಬುಧವಾರ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಗ್ರಾಮದ ಉದ್ದಕ್ಕೂ ಕಾಲ್ನಡಿಗೆಯಲ್ಲಿ ಸಂಚರಿಸಿದ ಜಿಲ್ಲಾಧಿಕಾರಿ ಗ್ರಾಮ ಪಂಚಾಯಿತಿ ಕಚೇರಿ, ಗ್ರಾಹಕರ ಸೇವಾ ಕೇಂದ್ರ, ನ್ಯಾಯಬೆಲೆ ಅಂಗಡಿ, ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಭೇಟಿ ನೀಡಿ ಕೇಂದ್ರಗಳ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆದರು. ಗ್ರಾಮದಲ್ಲಿ ನೆರೆದಿದ್ದ ಗ್ರಾಮಸ್ಥರು ತಮ್ಮ ಊರಿನಲ್ಲಿ ಬ್ಯಾಂಕ್ ಶಾಖೆಯನ್ನು ತೆರೆಯುವಂತೆ ಕೋರಿದಾಗ ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗೆ ಕ್ರಮಕೈಗೊಳ್ಳುವಂತೆ ಸೂಚಿಸಿದರು. ರೈತರ ಜಮೀನು ಖಾತೆ ಮಾಡುವ ಸಂಬಂಧ ಮತ್ತು ಆರೋಗ್ಯ ಕೇಂದ್ರವನ್ನು ಪ್ರಾರಂಭಿಸುವ ಸಂಬಂಧ ಗ್ರಾಮಸ್ಥರು ಮನವಿ ಮಾಡಿದಾಗ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಜಿಲ್ಲಾಧಿಕಾರಿ ಸರಳತೆ ಕಂಡು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.