ಬಸವನ ಬಾಗೇವಾಡಿಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೊಸದಾಗಿ ನಿರ್ಮಾಣಗೊಳ್ಳಲಿರುವ ಗ್ರಂಥಾಲಯದ ಸ್ಥಳ ಪರಿಶೀಲನೆ ನಡೆಸಿದರು. ಜಿಪಂ ಸಿಇಒ ರಿಷಿ ಆನಂದ, ತಹಸೀಲ್ದಾರ್ ವೈ.ಎಸ್. ಸೋಮನಕಟ್ಟಿ ಮತ್ತಿತರರಿದ್ದಾರೆ.  
ಜಿಲ್ಲೆ

ಬಸವನಬಾಗೇವಾಡಿಯಲ್ಲಿ ಗ್ರಂಥಾಲಯ ಸ್ಥಳ ವೀಕ್ಷಣೆ ಮಾಡಿದ ಡಿಸಿ

Vijyapura - Parsuram Bhasagi

ವಿಜಯಪುರ: ಬಸವನಬಾಗೇವಾಡಿಯಲ್ಲಿ ಹೊಸದಾಗಿ ಗ್ರಂಥಾಲಯ ನಿರ್ಮಾಣವಾಗುವ ಕುರಿತು ಜಿಲ್ಲಾಧಿಕಾರಿ ಟಿ.ಭೂಬಾಲನ್ ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಗ್ರಂಥಾಲಯ ಕಟ್ಟಡದಲ್ಲಿ ಸಾಕಷ್ಟು ಗಾಳಿ ಬೆಳಕು ಬರುವಂತೆ, ಕುಡಿಯುವ ನೀರು, ಶೌಚಗೃಹ, ಪಾರ್ಕಿಂಗ್, ಅಗತ್ಯ ಮೂಲ ಸೌಕರ್ಯಕ್ಕೆ ಆದ್ಯತೆ ನೀಡಿ ನಿರ್ಮಾಣ ಯೋಜನೆ ಸಿದ್ಧಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ನಗರದಲ್ಲಿ ರಸ್ತೆ ಒತ್ತುವರಿ ತೆರವುಗೊಳಿಸಲು ಸೂಚನೆ ನೀಡಿದ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒತ್ತುವರಿ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿ, ಬಾಕಿ ಕಡತಗಳ ಪರಿಶೀಲನೆ, ಆಧಾರ್ ನೋಂದಣಿ, ಭೂಮಿ ಪ್ರಗತಿ, ಮೋಜಣಿ ಕಡತ, ದಾಖಲೆಗಳನ್ನು ಆಧಾರ್‌ದೊಂದಿಗೆ ಜೋಡಣೆ ಪ್ರಗತಿ ಮಾಹಿತಿ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.
ಜಿಪಂ ಸಿಇಒ ರಿಷಿ ಆನಂದ, ತಹಸೀಲ್ದಾರ್ ವೈ.ಎಸ್. ಸೋಮನಕಟ್ಟಿ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್. ಚಿತ್ತರಗಿ ಮತ್ತಿತರರಿದ್ದರು.