ವಿಜಯಪುರದ ವಿ.ಬಿ. ದರಬಾರ ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಶಾಂತ ಪೂಜಾರಿ ಮತ್ತಿತರರಿದ್ದಾರೆ. 
ಜಿಲ್ಲೆ

ಸಿಇಟಿ ಕೇಂದ್ರಕ್ಕೆ ಡಿಸಿ ಭೇಟಿ

ಗಿರೀಶ ಸಗರ

ವಿಜಯಪುರ: ವಿವಿಧ ವೃತ್ತಿ ಪರ ಕೋರ್ಸ್​ಗಳ ಪ್ರವೇಶಕ್ಕಾಗಿ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ಮೊದಲ ದಿನದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬುಧವಾರ ಸುಸೂತ್ರವಾಗಿ ನಡೆಯಿತು.

ನಗರದ ವಿ.ಬಿ. ದರಬಾರ ಕಾಲೇಜಿನಲ್ಲಿರುವ ಕೇಂದ್ರಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೇಂದ್ರದಲ್ಲಿನ ಪರೀಾ ವ್ಯವಸ್ಥೆ, ವಿದ್ಯಾರ್ಥಿಗಳ ಆಸನ ವ್ಯವಸ್ಥೆ, ಪರೀಾ ಕಾರ್ಯಕ್ಕೆ ನಿಯೋಜಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯ ವಿಧಾನದ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ಪಡೆದರು.

ಜಿಲ್ಲೆಯ ಎಲ್ಲ ಪರೀಾ ಕೇಂದ್ರಗಳಲ್ಲಿ ಪರೀೆಗಳನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪರೀಾ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಬಾರದಂತೆ ಎಚ್ಚರಿಕೆ ವಹಿಸಬೇಕು. ತಮಗೆ ವಹಿಸಿದ ಜವಾಬ್ದಾರಿಯನ್ನು ಸುಸೂತ್ರವಾಗಿ ಹಾಗೂ ಸಮರ್ಪಕವಾಗಿ ನಿರ್ವಹಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು. ಪರೀಾ ಕೇಂದ್ರದಲ್ಲಿನ ವೆಬ್​ ಕಾಸ್ಟಿಂಗ್​ ಕಾರ್ಯ ನಿರ್ವಹಣೆ ವ್ಯವಸ್ಥೆ ವೀಸಿದರು. ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಪ್ರಶಾಂತ ಪೂಜಾರಿ ಮತ್ತಿತರರಿದ್ದರು.