ಜಿಲ್ಲೆ

ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ

ಮಂಜುನಾಥ ಕೋಳಿಗುಡ್ಡ

ಬೆಳಗಾವಿ: ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದರು.

ಇದಕ್ಕೂ ಮೊದಲು ಪ್ರತಿಷ್ಠಾಪಿಸುವ ಪರಿಸರಸ್ನೇಹಿ ಗಣೇಶ ಮೂರ್ತಿಗೆ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಇರುವ ಗಣಪತಿ‌ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದರು.

ಪ್ರತಿವರ್ಷದಂತೆ ಕಚೇರಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಕುಟುಂಬ ಸಮೇತ ಪೂಜೆಯನ್ನು ಸಲ್ಲಿಸಿದರು.

ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಪತ್ನಿ ಅಂಕಿತಾ, ಪುತ್ರ ಹಾಗೂ ಕಚೇರಿಯ ಸಿಬ್ಬಂದಿ ಇತರರಿದ್ದರು.

***