ಬೆಂಗಳೂರು: ಕೆಂಪೇಗೌಡರು ನಿಗದಿಪಡಿಸಿದ್ದ ಗಡಿಯನ್ನು ಮೀರಿ ಬೆಳೆಯುತ್ತಿರುವ ಬೆಂಗಳೂರಿನ ಸಮರ್ಪಕ ನಿರ್ವಹಣೆಗೆ 'ಗ್ರೇಟರ್ ಬೆಂಗಳೂರು ವಿಧೇಯಕ' ಪರಿಚಯಿಸಲಾಗುತ್ತಿದ್ದು, ಸುಮಾರು 70 ಸಾವಿರ ಸಲಹೆಗಳನ್ನು ಕ್ರೋಡಿಕರಿಸುವ ಮೂಲಕ ಅದಕ್ಕೆ ಸ್ವರೂಪ ನೀಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ನೌಕರರ ಸಂ ಹಾಗೂ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಬಳಗದ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಚುನಾವಣೆ ಸಂದರ್ಭದಲ್ಲಿ ರಾಜಧಾನಿಗೆ ಎದುರಾಗಿದ್ದ ಬರಗಾಲವನ್ನು ಬೆಂಗಳೂರು ಜಲಮಂಡಳಿ ಸಮರ್ಪಕವಾಗಿ ನಿಭಾಯಿಸಿದೆ. ಕಷ್ಟಕಾಲದಲ್ಲಿ ಸುಮಾರು 1.40 ಕೋಟಿ ಜನರಿಗೆ ವ್ಯವಸ್ಥಿತವಾಗಿ ನೀರು ಒದಗಿಸುವ ಹಾಗೂ ಒಳಚರಂಡಿ ವ್ಯವಸ್ಥೆ ಮೂಲಕ ಸೇವೆ ನೀಡಿದ ರೀತಿ ಶ್ಲಾನೀಯ ಎಂದರು.
ನಗರ ಹಾಗೂ ಹೊರವಲಯ ವ್ಯಾಪ್ತಿಯಲ್ಲಿ ಇರುವ ಕೆರೆಗಳನ್ನು ಉಳಿಸಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹೊಸ ಯೋಜನೆ ಪ್ರಾರಂಭಿಸಲಾಗುವುದು. ಕರ್ನಾಟಕ ರಾಜ್ಯ ಕೆರೆ ಅಭಿವೃದ್ಧಿ ಪ್ರಾಧಿಕಾರದೊಂದಿಗೆ ಸಭೆ ನಡೆಸಿ, ನಗರ ಹಾಗೂ ಹೊರವಲಯ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಜಲಮಂಡಳಿ ವಶಕ್ಕೆ ತಗೆದುಕೊಳ್ಳಲು ಚಿಂತನೆ ನಡೆಸಲಾಗುತ್ತಿದೆ. ಸಂಸ್ಕರಿಸಿದ ನೀರನ್ನು ಈ ಕೆರೆಗಳಲ್ಲಿ ತುಂಬಿಸುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸುವುದು ನಮ್ಮ ಗುರಿ ಎಂದು ತಿಳಿಸಿದರು.
ರಾಜಧಾನಿಯಲ್ಲಿ ಕಳೆದ 12 ವರ್ಷಗಳಿಂದ ನೀರಿನ ದರ ಹೆಚ್ಚಿಸಿಲ್ಲ. ಇದರಿಂದ ಜಲಮಂಡಳಿಯ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಉಂಟಾಗಿದೆ. ಈ ಬಗ್ಗೆ ಸದ್ಯದಲ್ಲೆ ಸರ್ಕಾರದ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಸಿಬ್ಬಂದಿ ನೇಮಕಾತಿಗೂ ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಜಲಮಂಡಳಿ ಅಧ್ಯ ಡಾ.ವಿ.ರಾಮ್ ಪ್ರಸಾತ್ ಮನೋಹರ್, ವಿಧಾನಪರಿಷತ್ ಸದಸ್ಯ ಎಸ್.ರವಿ, ಇತಿಹಾಸತ ಡಾ.ತಲಕಾಡು ಚಿಕ್ಕರಂಗೇಗೌಡ, ಜಲಮಂಡಳಿ ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ ಸಿ. ಮದನ್ ಮೋಹನ್, ಆರ್ಥಿಕ ಸಲಹೆಗಾರ ಸುಬ್ರಹ್ಮಣ್ಯ, ಮಂಡಳಿ ನೌಕರರ ಸಂದ ಅಧ್ಯ ಬಿ.ಕೆ. ಮರಿಯಪ್ಪ ಇತರರಿದ್ದರು.
ಮುಂದಿನ 20 ವರ್ಷಗಳಲ್ಲಿ ಬೆಂಗಳೂರಿನ ಜನಸಂಖ್ಯೆ ಇನ್ನೂ 1 ಕೋಟಿ ಹೆಚ್ಚಾಗಬಹುದು. ಆ ಸಮಯದಲ್ಲಿ ಜನರಿಗೆ ಮೂಲಸೌಕರ್ಯಗಳನ್ನು ನೀಡುವ ಜತಗೆ, ಎದುರಾಗುವ ಜ್ವಲಂತ ಸಮಸ್ಯೆಗಳ ನಿವಾರಣೆಗೆ ಈಗಿನಿಂದಲೇ ಸಜ್ಜಾಗಬೇಕಿದೆ. ಕೆಂಪೇಗೌಡರು ಕಟ್ಟಿದ ಕೆರೆಗಳನ್ನು ಉಳಿಸುವ ಕಾರ್ಯ ಆಗಬೇಕಾಗಿದೆ.
-ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠ