ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು: ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.
ಗದಗ: ಶಾಲಾ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆ, ಡಯಟ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗದಗ ಶಹರ ವತಿಯಿಂದ ನಗರದ ಎಸ್.ಎಂ.ಕೃಷ್ಣ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ 12 ಗದಗ ಇಲ್ಲಿ ಆಯೋಜಿಸಿದ 2024-25 ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ, ಅಕ್ಷರ ದಾಸೋಹ ಬಿಸಿಯೂಟ ಹಾಗೂ ಆರೋಗ್ಯ ಕಾಪಾಡಿಕೊಳ್ಳಲು ಮಾತ್ರೆಗಳನ್ನು ನೀಡಲಾಗುತ್ತಿದೆ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶ್ರೀಮತಿ ವೈಶಾಲಿ ಎಂ.ಎಲ್. ನುಡಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ. ಎಸ್. ಅವರು ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಶಿಸ್ತು ಹಾಗೂ ಸಂಯಮ ಕಲಿಸುವುದರ ಜೊತೆಗೆ ಅಕ್ಷರದ ಮೂಲಕ ಅರಿವು ಮೂಡಿಸಿ ಭವ್ಯ ಭಾರತದ ಉತ್ತಮ ನಾಗರಿಕರಾಗುವಂತೆ ಮಾಡುವ ಜವಾಬ್ದಾರಿ ಶಿಕ್ಷಕರದ್ದಾಗಿದೆ. ಕಾಯಾ-ವಾಚಾ-ಮನಸಾ ಕಾರ್ಯನಿರ್ವಹಿಸಬೇಕೆಂದರು.
ಉಪನಿರ್ದೇಶಕ ಎಂ.ಎ.ರಡ್ಡೇರ ಪ್ರಾಸ್ಥಾವಿಕವಾಗಿ ಮಾತನಾಡಿ ಈಗಾಗಲೇ ಜಿಲ್ಲೆಯ ಎಲ್ಲ ಶಾಲೆಗಳಿಗೆ ಪಠ್ಯ ಪುಸ್ತಕಗಳು ಹಾಗೂ ಸಮವಸ್ತ್ರಗಳನ್ನು ಪೂರೈಕೆ ಮಾಡಲಾಗಿದೆ. ಇಂದಿನ ದಿನವೇ ಪ್ರಾರಂಭೋತ್ಸವ ಮಾಡಿ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡುವಂತೆ ಎಲ್ಲ ಪ್ರಧಾನ ಗುರುಗಳಿಗೆ ತಿಳಿಸಲಾಗಿದೆ. ವಿದ್ಯಾರ್ಥಿಗಳನ್ನು ಶಾಲೆಗೆ ಹಾಜರಾಗುವಂತೆ ನೋಡಿಕೊಂಡು ಸರಕಾರದ ಹಾಗೂ ಇಲಾಖೆಯ ಉತ್ತೇಜಕಗಳನ್ನು ಮಕ್ಕಳಿಗೆ ತಲುಪಿಸುವಂತೆ ಮಾಡಿ ಹಾಜರಾತಿ ಹೆಚ್ಚಿಸಲು ಕ್ರಮ ಕೈಕೊಳ್ಳಲಾಗಿದೆಯೆಂದು ತಿಳಿಸಿದರು,
ಡಯಟ್ ಪ್ರಾಚಾರ್ಯ ಜಿ.ಎಲ್.ಬಾರಾಟಕ್ಕೆ, ಡಿವೈಪಿಸಿ ಎಂ.ಎಚ್.ಕಂಬಳಿ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ, ಶ್ರೀಮತಿ ಎಸ್.ಡಿ.ಕನವಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಬುರಡಿ, ರಾ.ಸ.ನೌ.ಸಂಘದ ಜಿಲ್ಲಾಧ್ಯಕ್ಷ ರವಿ ಗುಂಜಿಕರ ಗದಗ ತಾ.ಪಂ ಕಾ.ನಿ.ಅಧಿಕಾರಿ ಮಾಣಿಕರಾವ್ ಪ್ರೌ.ಶಾ.ಶಿ.ಸಂಘದ ಅಧ್ಯಕ್ಷ ಪಿ.ಎಚ್.ಕಡಿವಾಲ ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ವಿ.ಎಂ.ಹಿರೇಮಠ ಸ.ನಿ.ಅಕ್ಷರ ದಾಸೋಹ ಕೊಟ್ರೇಶ ವಿಭೂತಿ ವಿವೇಕಾನಂದಗೌಡ ಪಾಟೀಲ ಎಚ್.ಆರ್. ಕೋಣಿಮನಿ, ನಾಗರಳ್ಳಿ, ಶಾಲೆಯ ಶಿಕ್ಷಕ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶ್ರೀಮತಿ ವಿ.ಜಿ.ಪಾಟೀಲ ಪ್ರಾರ್ಥಿಸಿದರು. ನಾಡಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಬುರಡಿ ಸ್ವಾಗತಿಸಿದರು. ಕುಮಾರಿ ಶ್ರೀಯಾ ಸುಲ್ತಾನಪುರ ಶಿವಾನಿ ಸಂಗಮದ ವಿದ್ಯಾರ್ಥಿನಿಯರಿಂದ ಸಂವಿಧಾನ ಪೀಠಿಕೆ ಓದಲಾಯಿತು. ಶಿಕ್ಷಕ ಹೂಯಿಲಗೋಳ ಕಾರ್ಯಕ್ರಮ ನಿರೂಪಿಸಿದರು.