ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಘನತೆಯ ಬದುಕಿಗೆ ಶಿಕ್ಷಣವೊಂದೇ ದಾರಿ ಎಂದು ನಂಬಿದ ಸಾವಿತ್ರಿಬಾಯಿ ುಲೆ ಸಮಾಜಕ್ಕೆ ಮಾದರಿಯಾಗಿದ್ದಾರೆ. ಆದರ್ಶ ಶಿಕ್ಷಕಿ, ಚಿಂತಕಿ, ಹೋರಾಟಗಾರ್ತಿಯಾಗಿ ಸಮಾಜದ ಒಳಿತಿಗಾಗಿ ಹಗಲಿರುಳು ಶ್ರಮಿಸಿದರು ಎಂದು ಬೆಳಗಾವಿ ಶೈಕ್ಷಣಿಕ ಜಿಲ್ಲೆ ಡಿಡಿಪಿಐ ಲೀಲಾವತಿ ಹಿರೇಮಠ ಹೇಳಿದರು.
ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಈಚೆಗೆ ಅಂತಾರಾಷ್ಟ್ರೀಯ ಮಹಿಳಾ ದಿನ ಹಾಗೂ ಸಾವಿತ್ರಿಬಾಯಿ ುಲೆ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ತೊಟ್ಟಿಲು ತೂಗುವ ಕೈ ಜಗತ್ತನ್ನೇ ಆಳಬಲ್ಲದು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬುವುದಕ್ಕೆ ಸಾಕ್ಷಿಯಾಗಿ ಸಾವಿತ್ರಿಬಾಯಿ ಫುಲೆ ಜೀವನವೇ ನಮಗೆಲ್ಲ ದಾರಿದೀಪವಾಗಿದೆ ಎಂದರು.
ಸ್ಮಾರ್ಟ್ ಸಿಟಿ ಎಂಡಿ ಸೈದಾ ಆಫ್ರೀನ್ ಬಾನು ಬಳ್ಳಾರಿ ಮಾತನಾಡಿ, ಸಮಾನತೆಯ ನೆಲೆಯಲ್ಲಿ ಸಮಾಜ ಅಭಿವೃದ್ಧಿ, ಸುಶಿಕ್ಷಿತ ಸಮಾಜ ನಿರ್ಮಿಸುವಲ್ಲಿ ಮಹಿಳೆಯರ ಪಾತ್ರ ದೊಡ್ಡದಿದೆ. ಸಾವಿತ್ರಿಬಾಯಿ ುಲೆ ಸಾಧನೆಯು ಪ್ರತಿಯೊಬ್ಬ ಮಹಿಳೆಗೂ ಸ್ಫೂರ್ತಿಯಾಗಿದೆ. ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು ಎಂದರು.
ಕುಟುಂಬ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಮಹಿಳೆಯು ಆರ್ಥಿಕವಾಗಿ ಸ್ವಾವಲಂಬನೆಯ ಬದುಕು ರೂಪಿಸಿಕೊಳ್ಳಬೇಕು. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿದರೆ ಮಾತ್ರ ಸಮಾಜ ಅಭಿವೃದ್ಧಿ ಸಾಧ್ಯ. ಮಹಿಳೆಯರಿಗೆ ವೇದಿಕೆ ಕಲ್ಪಿಸಿದರೆ ಸಾಧಿಸಿ ತೋರಿಸುವ ಸಾಮರ್ಥ್ಯ ಅವರಲ್ಲಿದೆ ಎಂದು ಹೇಳಿದರು.
ಜಿಲ್ಲೆಯ 67 ಶಿಕ್ಷಕ ಹಾಗೂ ಶಿಕ್ಷಕಿಯರಿಗೆ ಮಾತೆ ಸಾವಿತ್ರಿಬಾಯಿಫುಲೆ ಜಿಲ್ಲಾ ಪ್ರಶಸ್ತಿ ಪ್ರದಾನ ಮಾಡಲಾಯಿತು. 16 ಶಾಲೆಗಳಿಗೆ ಅತ್ಯುತ್ತಮ ಶಾಲಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ಸಾವಿತ್ರಿಬಾಯಿುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ನಸ್ರಿನ್‌ಬಾನು ಎಚ್. ಕಾಶೀಂನವರ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ದಾಸಪ್ಪನವರ, ಎ.ಎಸ್. ಪ್ಯಾಟಿ, ಸಿ.ವೈ. ತುಬಾಕದ ಇತರರಿದ್ದರು.