ಕಾಸರಗೋಡು: ಆದೂರು ಪೊಲೀಸ್ ಆಣೆ ವ್ಯಾಪ್ತಿಯ ಅಡೂರು ಬೆಳ್ಳಚ್ಚೇರಿ ಗುಳಿಗನಮೂಲೆ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮೃತದೇಹದ ಗುರುತು ಪತ್ತೆಗಾಗಿ ಡಿಎನ್‌ಎ ತಪಾಣೆಗೆ ಪೊಲೀಸರು ಮುಂದಾಗಿದ್ದಾರೆ. ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿರಬೇಕೆಂದು ಸಂಶಯಿಸಲಾಗಿದೆ. ಈ ಮಧ್ಯೆ ಪತ್ತನಂತಿಟ್ಟ ನಿವಾಸಿ, ರಬ್ಬರ್ ಟ್ಯಾಪಿಂಗ್ ಕಾರ್ಮಿಕರೊಬ್ಬರು ನಾಪತ್ತೆಯಾಗಿದ್ದು, ಅವರ ಸಂಬಂಧಿಕರನ್ನು ಕರೆಸಿ, ಮಾಹಿತಿ ಸಂಗ್ರಹಿಸಲಾಗುತ್ತಿದೆ.