ಜಿಲ್ಲೆ

ಎಸ್ಟಿ ಮೀಸಲು ಹೆಚ್ಚಳಕ್ಕೆ ಡಿ.10ರ ಗಡುವು

ಮೃತ್ಯುಂಜಯ ಕಪಗಲ್

ಬೆಂಗಳೂರು: ವಾಲ್ಮೀಕಿ ಸಮಾಜಕ್ಕೆ ಶೈಕ್ಷಣಿಕ ಹಾಗೂ ಉದ್ಯೋಗದಲ್ಲಿ 7.5 ಮೀಸಲಾತಿಗೆ ಒತ್ತಾಯಿಸಿ ನಡೆಯುತ್ತಿದ್ದ ಧರಣಿ, ಸಮಾಜದ ಶಾಸಕರು, ಸಂಸದರು ಹಾಗೂ ಮುಖಂಡರ ಭರವಸೆ ಮೇಲೆ ತಾತ್ಕಲಿಕವಾಗಿ ಸ್ಥಗಿತವಾಗಿದೆ.

ಸರ್ಕಾರಕ್ಕೆ ಡಿ.10ರ ಗಡುವು ನೀಡಿದ್ದು, ನಮ್ಮ ಮನವಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಸಚಿವರು, ಶಾಸಕರು ಹಾಗೂ ಸಂಸದರು ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋರಾಟ ಮಾಡುವ ಭರವಸೆ ನೀಡಿದ್ದಾರೆ.

ಎಲ್ಲಾ ಸಮಾಜಗಳು ತಮ್ಮ ಸಾಮಾಜಿಕ ನ್ಯಾಯ ಕೇಳುತಿದ್ದಾರೆ. ಹೀಗಾಗಿ ನ್ಯಾ.ನಾಗಮೋಹನ ದಾಸ್ ವರದಿ ಜಾರಿಗೆ ಆಗ್ರಹಿಸಲಾಗುತ್ತಿದೆ ಎಂದು ಮಹರ್ಷಿ ವಾಲ್ಮೀಕಿ ಪೀಠದ ಜಗದ್ಗುರು ಶ್ರೀಪ್ರಸನ್ನಾನಂದ ಸ್ವಾಮೀಜಿ ಹೇಳಿಕೆ ನೀಡಿದರು.