ಜಿಲ್ಲೆ

ಕುಸಿದು ಬಿದ್ದು ಸಾವು

ಇಂದಿರಾ ಎನ್ ಕೆ

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಬಳಿ ಸರ್ವೀಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಆಯತಪ್ಪಿ ನೆಲಕ್ಕೆ ಬಿದ್ದು ಗಾಯಗೊಂಡಿದ್ದ ಮೂಡುಬೆಳ್ಳೆ ಜಾನ್ಸನ್ ರೋಡ್ರಿಗಸ್ ಮಂಗಳವಾರ ಮೃತಪಟ್ಟಿದ್ದಾರೆ. ಅವಿವಾಹಿತರಾಗಿದ್ದ ಅವರು ಕುಡಿದ ಅಮಲಿನಲ್ಲಿ ನಡೆದು ಹೋಗುತ್ತಿದ್ದಾಗ ಬಿದ್ದು ಗಾಯಗೊಂಡಿದ್ದು, ತಕ್ಷಣ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಪರೀಕ್ಷಿಸಿದ ವೈದ್ಯರು ಮೃತಪಟ್ಟರುವುದನ್ನು ಖಚಿತಪಡಿಸಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.