ಜಿಲ್ಲೆ

ವಾಹನ ಡಿಕ್ಕಿಯಾಗಿ ಸಾವು

ಮರಿದೇವ ಹೂಗಾರ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಬೈಪಾಸ್‌ನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.
ನವಲೂರು ಗ್ರಾಮದ ಸಚಿನ ಪ್ರಕಾಶ ಬೋಸ್ಲೆ(40) ಮೃತರು. ಮಧ್ಯಾಹ್ನ 3.30ರ ಸುಮಾರಿಗೆ ಬೈಪಾಸ್‌ನ ಸಿಮ್ಲಾನಗರ ಬ್ರಿಡ್ಜ್ ಹತ್ತಿರ ತೆರಳುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹುಬ್ಬಳ್ಳಿ ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.