ಜಿಲ್ಲೆ

ದೇವಾಲಯದ ಬಾವಿಯಲ್ಲಿ ವೃದ್ಧೆಯ ಶವ ಪತ್ತೆ; ಕಂಗಾಲಾದ ಸ್ಥಳೀಯರು

reportermys

ಗುಂಡ್ಲುಪೇಟೆ: ತಾಲೂಕಿನ ಬೇಗೂರು ಗ್ರಾಮದ ರಾಮಮಂದಿರದ ಬಾವಿಯಲ್ಲಿ ಮಂಗಳವಾರ ಬೆಳಗ್ಗೆ ವೃದ್ಧೆಯ ಶವ ಪತ್ತೆಯಾಗಿದೆ.

ಗ್ರಾಮದ ತಾರಾಮಣಿ(7೦) ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲೇ ಇರುವ ರಾಮಮಂದಿರದ ಬಾವಿಯಲ್ಲಿ ನೀರು ತೆಗೆದುಕೊಳ್ಳಲು ಹೋದ ಮಹಿಳೆಯೊಬ್ಬರು ಬಾವಿಯಲ್ಲಿ‌‌ ಶವ‌‌‌‌ ಕಂಡು ಗ್ರಾಮಸ್ಥರಿಗೆ ತಿಳಿಸಿದ್ದಾರೆ.

ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ತಾರಾಮಣಿ ಅವರು ಸಾವಿಗೆ ಕಾರಣ ಏನೆಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದ್ದು, ಬೇಗೂರು‌ ಪೊಲೀಸರು ಸ್ಥಳಕ್ಕೆ ಆಗಮಿಸಿ‌ ಪರಿಶೀಲನೆ‌ ನಡೆಸಿದ್ದಾರೆ.