ಜಿಲ್ಲೆ

ಅಪರಿಚಿತ ವಾಹನ ಡಿಕ್ಕಿಯಿಂದ ಸಾವು

ಮರಿದೇವ ಹೂಗಾರ

ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನವೊಂದು ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದುಕೊಂಡು ಹೋದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.

ತಾಲೂಕಿನ ಅರಳಿಕಟ್ಟಿ ಗ್ರಾಮದ ಮಂಜುನಾಥ ನಾಗಪ್ಪ ಹಾದಿಮನಿ (38) ಮೃತಪಟ್ಟಿದ್ದಾರೆ. ಹಾವೇರಿಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ವಾಹನದ ಚಾಲಕ ಡಿಕ್ಕಿ ಹೊಡೆದುಕೊಂಡು ವಾಹನ ಸಮೇತ ಪರಾರಿಯಾಗಿದ್ದಾನೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.