ಜಿಲ್ಲೆ

ಕೃಷಿ ಹೊಂಡದಲ್ಲಿ ಮುಳುಗಿ ಸಾವು

ವಿಜಯವಾಣಿ ಸುದ್ದಿಜಾಲ ಧಾರವಾಡ

ಕೃಷಿ ಹೊಂಡದ ಮುಳುಗಿ ಯವಕ ಮೃತಪಟ್ಟ ಘಟನೆ ತಾಲೂಕಿನ ಮಾರಡಗಿ ಗ್ರಾಮದಲ್ಲಿ ಸಂಭವಿಸಿದೆ.

ಮಾರಡಗಿ ಗ್ರಾಮದ ಕಲ್ಮೇಶ ಗರಗದ (24) ಮೃತಪಟ್ಟ ಯುವಕ. ನೀರಿನಲ್ಲಿ ಈಜಾಡಲು ಕೃಷಿ ಹೊಂಡಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಯುವಕನ ಶವ ಪತ್ತೆ ಮಾಡಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.