ಜಿಲ್ಲೆ

ವಾಹನ ಡಿಕ್ಕಿಯಿಂದ ಸಾವು

ಮರಿದೇವ ಹೂಗಾರ

ಹುಬ್ಬಳ್ಳಿ: ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ.
ಛಬ್ಬಿ ಗ್ರಾಮದ ಮಾರುತಿ ಚಂದ್ರಶೇಖರ ಪವಾರ(42) ಮೃತರು. ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ಹೊರಟಿದ್ದ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.