ಜಿಲ್ಲೆ

ಮೇಯಲು ಬಿಟ್ಟಿದ್ದ ದನ ಸಾವು

ಸೌಮ್ಯ ಆರ್

ಬೆಳ್ತಂಗಡಿ: ಕಿಲ್ಲೂರು ಕೋಯನಗರ ಎಂಬಲ್ಲಿ ಮೇಯಲು ಬಿಟ್ಟಿದ್ದ ದನಕ್ಕೆ ದುಷ್ಕರ್ಮಿಗಳು ವಿಷವಿಕ್ಕಿ ಸಾಯಿಸಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿನ ನಿವಾಸಿ ಇಸುಬು ಎಂಬುವರಿಗೆ ಸೇರಿದ ದನವನ್ನು ಸೋಮವಾರ ಎಂದಿನಂತೆ ಮೇಯಲು ಬಿಟ್ಟಿದ್ದರು. ಸಂಜೆ ವೇಳೆ ದನ ಮೃತಪಟ್ಟಿರುವುದು ಕಂಡುಬಂದಿದೆ. ನೋಡಿದಾಗ ವಿಷ ಪ್ರಾಶನದಿಂದ ಮೃತಪಟ್ಟಿರುವಂತೆ ಕಂಡುಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಬೆಳ್ತಂಗಡಿ ಇನ್‌ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದ ತಂಡ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ದನದ ಕಳೇಬರದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು, ವರದಿ ಬಂದ ಬಳಿಕವಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಲಿದೆ.