ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ 62 ವರ್ಷದ ವೃದ್ಧನಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆ ರದ್ದುಗೊಂಡಿದೆ. ಈ ಕುರಿತು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶವೊಂದನ್ನು ನೀಡಿದೆ. ನ್ಯಾಯಮೂರ್ತಿ ಜಿ. ನರೇಂದ್ರ ಮತ್ತು ನ್ಯಾಯಮೂರ್ತಿ ಎಂ.ಎ ಅರುಣ್ ಅವರಿದ್ದ ಪೀಠದಿಂದ ಈ ಆದೇಶ ನೀಡಲಾಗಿದೆ.
ಕೋಲಾರದ ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2020ರಲ್ಲಿ ಈ ಅತ್ಯಾಚಾರ ಪ್ರಕರಣ ನಡೆದಿತ್ತು. 62 ವರ್ಷದ ವೆಂಕಟೇಶಪ್ಪ ಎಂಬಾತ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಕೋಲಾರದ 2ನೇ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು.