ಸಾಧನಾ ದೇವಾಡಿಗ 
ಜಿಲ್ಲೆ

ಚರ್ಚಾ ಸ್ಪರ್ಧೆಯಲ್ಲಿ ಸಾಧನಾಗೆ ದ್ವಿತೀಯ

ಇಂದಿರಾ ಎನ್ ಕೆ

ಕಾರ್ಕಳ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಬೆಂಗಳೂರು ಮತ್ತು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಉಡುಪಿ ಆಶ್ರಯದಲ್ಲಿ ಜಿಲ್ಲಾಮಟ್ಟದ ಸಹಕಾರ ಕುರಿತು ನಡೆದ ಚರ್ಚಾ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ ವಿದ್ಯಾರ್ಥಿನಿ ಸಾಧನಾ ದೇವಾಡಿಗ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕುಂದಾಪುರ ಕಾಳಾವರದ ಉಮೇಶ್ ಮತ್ತು ವಿನೋದ ದಂಪತಿ ಪುತ್ರಿ. ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.