ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಜೋಯಿಸರಹರಳಹಳ್ಳಿಯಲ್ಲಿ ಸೋಮವಾರ ನಡೆದಿದೆ.
ಗ್ರಾಮದ ಹನುಮಂತಪ್ಪ ನಿಂಗಪ್ಪ ಮುದಿಹಾಳ (62) ಮೃತ ರೈತ.
ಇವರು ಬ್ಯಾಂಕ್ ಹಾಗೂ ಕೈಗಡವಾಗಿ 4.35 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆ ಮಳೆಯಿಂದ ಹಾಳಾಗಿ ಹೋಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.