ಜಿಲ್ಲೆ

ಕೈಗಡ ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Haveri - Kariyappa Aralikatti

ಶಿಗ್ಗಾಂವಿ: ಕೈಗಡವಾಗಿ ಮಾಡಿದ್ದ ಸಾಲ ತೀರಿಸಲಾಗದೆ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ಗಾಂಧಿ ನಗರದಲ್ಲಿ ನಡೆದಿದೆ.
ಮಂಜುನಾಥ ಬಸಪ್ಪ ಗಾಳಿ (34) ಮೃತ ವ್ಯಕ್ತಿ.
ಈತ ಕೂಲಿ ಕೆಲಸ ಮಾಡಿಕೊಂಡಿದ್ದು ಕೈಗಡವಾಗಿ ಸಾಲ ಮಾಡಿಕೊಂಡಿದ್ದ. ಇದನ್ನು ತೀರಿಸಲಾಗದೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.