ಹಿರೇಕೆರೂರ: ಸಾಲಬಾಧೆಯಿಂದ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಾದ್ರಿಹಳ್ಳಿಯಲ್ಲಿ ಸೋಮವಾರ ಸಂಭವಿಸಿದೆ.
ನಾಗರಾಜ ವೀರಸಂಗಪ್ಪ ಕಣಸೋಗಿ (47) ಮೃತ ರೈತ.
ಈತ ಕೃಷಿಗಾಗಿ ಸಹಕಾರಿ ಬ್ಯಾಂಕ್ ಹಾಗೂ ಕೈಗಡವಾಗಿ 2.80 ಲಕ್ಷ ರೂ. ಸಾಲ ಮಾಡಿಕೊಂಡಿದ್ದು, ಜಮೀನಿನಲ್ಲಿ ಬೆಳೆ ಸರಿಯಾಗಿ ಬಾರದ ಕಾರಣ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಹಿರೇಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.