ಜಿಲ್ಲೆ

ಸಾಲ ಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Haveri - Kariyappa Aralikatti

ರಾಣೆಬೆನ್ನೂರ: ಸಾಲಬಾಧೆಯಿಂದ ಬೇಸತ್ತ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕುಸಗೂರ ಗ್ರಾಮದಲ್ಲಿ ಶುಕ್ರವಾರ ಸಂಭವಿಸಿದೆ.
ಸಂಗನಗೌಡ ರಾಮನಗೌಡ ಕರೇಗೌಡ್ರ (60) ಮೃತ ರೈತ.
ಇವರು 5.7 ಎಕರೆ ಜಮೀನು ಹೊಂದಿದ್ದು ಕೃಷಿಗಾಗಿ ಬ್ಯಾಂಕ್‌ನಲ್ಲಿ 4.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಅದು ಬಡ್ಡಿ ಸೇರಿ ಇದೀಗ 8.50 ಲಕ್ಷ ರೂ. ಆಗಿದೆ. ಪ್ರಕೃತಿ ವಿಕೋಪದಿಂದಾಗಿ ರೈತ ಬೆಳೆದಿದ್ದ ಬೆಳ್ಳುಳ್ಳಿ ಹಾಗೂ ಮೆಕ್ಕೆಜೋಳ ಫಸಲು ಕೈಕೊಟ್ಟಿತ್ತು. ಹೀಗಾಗಿ ಸಾಲ ತೀರಿಸುವ ಚಿಂತೆಯಿಂದ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.