ಜಿಲ್ಲೆ

ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Haveri - Kariyappa Aralikatti

ಬ್ಯಾಡಗಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಚಿಕ್ಕಬಾಸೂರ ಗ್ರಾಮದಲ್ಲಿ ನಡೆದಿದೆ.

ಮಹೇಶ ಫಕ್ಕೀರಪ್ಪ ಹುಳ್ಳೇರ (37) ಮೃತ ರೈತ.

ಇವರು ಬ್ಯಾಂಕ್​ ಹಾಗೂ ಕೈಗಡವಾಗಿ ಸಾಲ ಮಾಡಿಕೊಂಡಿದ್ದು ಭತ್ತ ನಾಟಿ ಮಾಡಿದ್ದರು. ಆದರೆ, ಭತ್ತದ ಬೆಳೆ ಹಾಳಾಗಿದ್ದರಿಂದ ನಷ್ಟ ಅನುಭವಿಸಿದ್ದರು. ಇದರಿಂದ ಮನನೊಂದು ಜಮೀನಿನಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕಾಗಿನೆಲೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.