ಜಿಲ್ಲೆ

ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

Haveri - Kariyappa Aralikatti

ರಾಣೆಬೆನ್ನೂರ: ಸಾಲಬಾಧೆ ತಾಳಲಾರದೆ ವಿಷ ಸೇವಿಸಿದ್ದ ತಾಲೂಕಿನ ಮುಷ್ಟೂರ ಗ್ರಾಮದ ರೈತ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ.
ಗ್ರಾಮದ ಜಗದೀಶ ಸಿದ್ದಪ್ಪ ಜಾನಪ್ಪನವರ (36) ಮೃತ ರೈತ.
ಇವರು 5.3 ಎಕರೆ ಜಮೀನು ಹೊಂದಿದ್ದು ಕೃಷಿಗಾಗಿ ತಾಲೂಕಿನ ಮಾಕನೂರ ಗ್ರಾಮದ ಯೂನಿಯನ್ ಬ್ಯಾಂಕ್‌ನಲ್ಲಿ 5 ಲಕ್ಷ ರೂ. ಬೆಳೆ ಸಾಲ ಹಾಗೂ ಖಾಸಗಿಯಾಗಿ 2-3 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಪ್ರಕೃತಿ ವಿಕೋಪದಿಂದಾಗಿ ಬೆಳೆಗಳು ಸರಿಯಾಗಿ ಬಾರದ ಕಾರಣ ಮನನೊಂದು ಸೆ. 14ರಂದು ಮನೆಯಲ್ಲಿ ವಿಷ ಸೇವನೆ ಮಾಡಿದ್ದರು. ಕೂಡಲೇ ಕುಟುಂಬದ ಸದಸ್ಯರು ಆತನನ್ನು ದಾವಣಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.