ಜಿಲ್ಲೆ

ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

Haveri - Kariyappa Aralikatti

ಸಾಲಬಾಧೆ, ರೈತ, ವಿಷ, ಸೇವಿಸಿ, ಆತ್ಮಹತ್ಯೆ, Debt-ridden farmer commits suicide by consuming poison

ಹಾವೇರಿ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ರಮೇಶಪ್ಪ ಮಹದೇವಪ್ಪ ವಾಳದ (65) ಮೃತ ರೈತ.

ಇವರು ಕೃಷಿಗಾಗಿ ಬ್ಯಾಂಕ್​ನಲ್ಲಿ 1.35 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಮಳೆಯಿಂದಾಗಿ ಹಾಳಾದ ಕಾರಣ ಸಾಲ ತೀರಿಸಲಾಗದೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.