ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಇಟಗಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗಣೇಶ ನಿಂಗಪ್ಪ ಕರೆಚಿಕ್ಕಪ್ಪನವರ (35) ಆತ್ಮಹತ್ಯೆ ಮಾಡಿಕೊಂಡ ರೈತ.
ಇವರು 22 ಎಕರೆ ಜಮೀನು ಹೊಂದಿದ್ದು ಕೃಷಿಗಾಗಿ ಬ್ಯಾಂಕ್ನಲ್ಲಿ 20 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂರ್ಪೂಣ ಹಾಳಾಗಿ ಹೋಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.