ಜಿಲ್ಲೆ

ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Haveri - Kariyappa Aralikatti

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನೂಕಾಪುರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ನೀಲಪ್ಪ ಗುಡ್ಡಪ್ಪ ಗಂಟಿ (67) ಮೃತ ರೈತ.

ಇವರು ಬ್ಯಾಂಕ್​ ಹಾಗೂ ವಿವಿಧ ಸಂಘ-ಸಂಸ್ಥೆಗಳಲ್ಲಿ 3.85 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ನಿರಂತರ ಮಳೆಯಿಂದ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.