ಜಿಲ್ಲೆ

ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Haveri - Kariyappa Aralikatti

ಹಾವೇರಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಬಸಾಪುರ ಗ್ರಾಮದಲ್ಲಿ ಗುರುವಾರ ನಡೆದಿದೆ.

ಕ್ಕೀರಗೌಡ ಸೋಮನಗೌಡ ಪಾಟೀಲ (41) ಮೃತ ರೈತ.

ಇವರು ಕೃಷಿಗಾಗಿ ಬ್ಯಾಂಕ್​ ಹಾಗೂ ವಿವಿಧ ಸಂ&ಸಂಸ್ಥೆಗಳಲ್ಲಿ 8 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂರ್ಪೂಣ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗುತ್ತಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.