ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೆನಕನಕೊಂಡ ಗ್ರಾಮದಲ್ಲಿ ಸೋಮವಾರ ನಡೆದಿದೆ.
ನಾಗರಾಜ ಬಸವಣ್ಣೆಪ್ಪ ಕೊಪ್ಪದ (37) ಮೃತ ರೈತ.
ಇವರು ಬ್ಯಾಂಕ್ನಲ್ಲಿ 2.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂರ್ಪೂಣವಾಗಿ ಹಾಳಾಗಿ ಹೋಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.