ಹಾವೇರಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವಿಹೊಸೂರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮಕ್ಬೂಲಸಾಬ ಯೂಸೂಫ್ಸಾಬ ಗಡದರ (38) ರೈತ.
ಇವರು ಬ್ಯಾಂಕ್ ಹಾಗೂ ವಿವಿಧ ಸಂಘ-ಸಂಸ್ಥೆಗಳಲ್ಲಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ಮಳೆಯಿಂದ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.